ಪ್ರಕೃತಿ ಬೆಳಗಾವಿ

*ಕಾಕತಿ ಬ್ರಿಡ್ಜ್ ಬಳಿ ಮಹಿಳೆಯ ಚಿನ್ನದ ಸರಕ್ಕೆ ಕನ್ನ! ಬೈಕ್‌ನಲ್ಲಿ ಬಂದ ಖದೀಮರಿಂದ ಕೃತ್ಯ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿ ತಾಲೂಕಿನ ಕಾಕತಿ ಬ್ರೀಜ್ ಸಮೀಪ ಮಹಿಳೆಯೊಬ್ಬರು ನಿಂತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ವರದಿಯಾಗಿದೆ.

ಮಹಿಳೆಯ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು, ಅಲ್ಲಿಯೇ ಇದ್ದವರಂತೆ ನಟಿಸಿ ಸಮಯ ಸಾಧಿಸಿದ್ದಾರೆ. ಬಳಿಕ ಏಕಾಏಕಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಕ್ಷಣಾರ್ಧದಲ್ಲಿ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಮಹಿಳೆಯರ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಕಳವಳ ವ್ಯಕ್ತವಾಗಿದೆ. ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕಾಕತಿ ಬ್ರಿಡ್ಜ್ ಬಳಿ ನಡೆದ ಈ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಹಾಗೂ ಪೊಲೀಸ್ ಇಲಾಖೆಯ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಬೇಕಿದೆ.*******************************

Leave a Reply

Your email address will not be published. Required fields are marked *

Back to top button