ಪ್ರಕೃತಿ ಬೆಳಗಾವಿ

*ವಿದ್ಯುತ್ ಕಂಬಗಳಿವೆ, ಬೀದಿ ದೀಪಗಳಿಲ್ಲ! ಭಾರತ್ ನಗರ–ಬ್ರಹ್ಮದೇವರ ದೇವಸ್ಥಾನದ ರಸ್ತೆ ಬೆಳಗಿಸಲು ಸಾರ್ವಜನಿಕರ ಮನವಿ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿ ತಾಲೂಕಿನ ಕಾಕತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಾರತ್ ನಗರ ಹಾಗೂ ಬ್ರಹ್ಮದೇವರ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಬೀದಿ ದೀಪಗಳ ಅಳವಡಿಕೆಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ರಸ್ತೆಯ ಬದಿಯಲ್ಲಿ ವಿದ್ಯುತ್ ಕಂಬಗಳಿದ್ದರೂ, ಅವುಗಳಿಗೆ ಬೀದಿ ದೀಪಗಳನ್ನು ಅಳವಡಿಸದ ಕಾರಣ ಸಾಯಂಕಾಲದ ನಂತರ ರಸ್ತೆ ಕತ್ತಲಿನಿಂದ ಆವರಿಸುತ್ತದೆ. ಪ್ರತಿದಿನ ಸಂಜೆ ವಾಕಿಂಗ್‌ಗಾಗಿ ಬರುವ ಸಾರ್ವಜನಿಕರು ಹಾಗೂ ತಮ್ಮ ಹೊಲಗಳಿಗೆ ತೆರಳುವ ರೈತರು ಈ ರಸ್ತೆಯನ್ನು ಬಳಸುತ್ತಿದ್ದು, ಬೆಳಕಿನ ಕೊರತೆಯಿಂದ ತೊಂದರೆ ಅನುಭವಿಸುವಂತಾಗಿದೆ.

ವಿಶೇಷವಾಗಿ ಸಾಯಂಕಾಲದ ವೇಳೆಯಲ್ಲಿ ರಸ್ತೆಯಲ್ಲಿ ಸಂಚರಿಸುವವರಿಗೆ ಸೂಕ್ತ ಬೆಳಕಿನ ವ್ಯವಸ್ಥೆ ಇಲ್ಲದಿರುವುದು ಸಮಸ್ಯೆಯಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಈ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸುವುದು ಅಗತ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಕಾಕತಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಾರ್ವಜನಿಕರು ಮನವಿ ಸಲ್ಲಿಸಿ, ರಸ್ತೆಯ ಬದಿಯಲ್ಲಿರುವ ವಿದ್ಯುತ್ ಕಂಬಗಳಿಗೆ ಬೀದಿ ದೀಪಗಳನ್ನು ಅಳವಡಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ವಿನಂತಿಸಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರ ಮನವಿಗೆ ಸ್ಪಂದಿಸಿ, ಆದಷ್ಟು ಬೇಗ ಬೀದಿ ದೀಪಗಳ ವ್ಯವಸ್ಥೆ ಕಲ್ಪಿಸಬೇಕೆಂಬುದು ಗ್ರಾಮಸ್ಥರ ಒತ್ತಾಯವಾಗಿದೆ.*************************

Leave a Reply

Your email address will not be published. Required fields are marked *

Back to top button