ಪ್ರಕೃತಿ ಬೆಳಗಾವಿ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆ…!!


ಪ್ರಕೃತಿ ಬೆಳಗಾವಿ ಸುದ್ದಿ : ಧಾರವಾಡ ಮೇ.12 : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಇಂದು (ಮೇ.12) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯರ ಅವರ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುಷ್ಪಾರ್ಚನೆ ಸಲ್ಲಿಸಿ, ನಮಿಸಿದರು.

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಸಮಾಜದ ಮುಖಂಡರಾದ ಆರ್ ಡಿ ಕುಲ್ಕರ್ಣಿ, ಕರುಗುದರಿ, ಅನಂತ ತೀಟೆ ಹಾಗೂ ಹಿರಿಯ ನಾಗರಿಕರು, ಸಾರ್ವಜನಿಕರು ಉಪಸ್ಥಿತರಿದ್ದರು.**********************************


Back to top button