ಪ್ರಕೃತಿ ಬೆಳಗಾವಿ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಾಷ್ಟ್ರೀಯ ಭಯೋತ್ಪದನಾ ವಿರೋಧಿ ದಿನ ಆಚರಣೆ…!!
ಪ್ರಕೃತಿ ಬೆಳಗಾವಿ ಸುದ್ದಿ : ಧಾರವಾಡ ಮೇ.21: ಪ್ರತಿವರ್ಷದಂತೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನ ಆಚರಿಸಲಾಯಿತು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾವಿಧಿ ಬೋಧಿಸಿದರು.
ಮೇ 11 ರಂದು ಪ್ರತಿವರ್ಷ ದೇಶದಾದ್ಯಂತ ರಾಷ್ಟ್ರೀಯ ಭಯೋತ್ಪಾದನಾ ವಿರೋದಿನ ಆಚರಿಸುವ ಮೂಲಕ ಭಯೋತ್ಪಾದನೆ ಅಪಾಯದ ಕುರಿತು ದೇಶದ ಎಲ್ಲ ವರ್ಗಗಳ ಜನರಲ್ಲಿ ಜಾಗೃತಿ ಮೂಡಿಸುವುದು ಈ ದಿನಾಚರಣೆಯ ಉದ್ದೇಶವಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿಗಳು, ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿದ್ದರು.****************************






