ಪ್ರಕೃತಿ ಬೆಳಗಾವಿ

ಸಹಕಾರ ರತ್ನ ದಿ. ರಾವಸಾಹೇಬ ಪಾಟೀಲ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವ ಸತೀಶ್‌ ಜಾರಕಿಹೊಳಿ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಜಿಲ್ಲೆಯ ಹಿರಿಯ ಸಹಕಾರಿ ಧುರಿಣರು, ಸಾಮಾಜಿಕ, ರಾಜಕೀಯ, ಧಾರ್ಮಿಕ, ಸಹಕಾರಿ ಕ್ಷೇತ್ರದ ಹಿರಿಯ ನಾಯಕ, ಸಹಕಾರಿ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ದಿ. ರಾವಸಾಹೇಬ ಪಾಟೀಲ ಮನೆಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಶನಿವಾರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ನಿಪ್ಪಾಣಿ ತಾಲೂಕಿನ ಬೋರಗಾಂವ ಪಟ್ಟಣದಲ್ಲಿರುವ ದಿ. ರಾವಸಾಹೇಬ ಪಾಟೀಲ ಮನೆಗೆ ಭೇಟಿ ನೀಡಿದ ಸಚಿವರು, ದಿ. ರಾವ್ ಸಾಹೇಬ ಪಾಟೀಲಕುಟುಂಬಸ್ಥರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಈ ವೇಳೆ ಮಾತನಾಡಿದ ಅವರು, ದಿ. ರಾವಸಾಹೇಬ ಪಾಟೀಲ ಅವರು ರೈತ ಕುಟುಂಬದಿಂದ ಬಂದಂತವರು. ಅವರು ತಮ್ಮ ಕುಟುಂಬದಿಂದ ಸಾಮಾಜಿಕ ಕಾರ್ಯಗಳನ್ನು ತಮ್ಮ ತಂದೆ ಮತ್ತು ತಾಯಿಯಿಂದ ಕಲೆತವರು. ಬೋರಗಾಂವ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಅಭಿವೃದ್ಧಿಗೋಳಿಸಲು ಅವಿರತ ಪ್ರಯತ್ನಗಳನ್ನು ಮಾಡಿದವರು ಮತ್ತು ಅನೇಕ ಸವಾಲುಗಳನ್ನು ಎದುರಿಸುತ್ತಿರುವ ಸಹಕಾರ ಮತ್ತು ಸಾಮಾಜಿಕ ಕಾರ್ಯಗಳೊಂದಿಗೆ ಧಾರ್ಮಿಕ ಕಾರ್ಯಗಳನ್ನು ಸಂಯೋಜಿಸಿದವರು. ಅವರು ತಮ್ಮ ಜೀವನದಲ್ಲಿ ಅನೇಕ ಹೋರಾಟಗಳ ಮೂಲಕ ಯಶಸ್ವಿಯಾದರು ಎಂದರು.

ರಾಜಕಾರಣ ಮಾಡುತ್ತಲೇ ಸಾಮಾನ್ಯ ಕಾರ್ಯಕರ್ತನನ್ನು ರಾಜಕೀಯದಿಂದ ಮೇಲೆತ್ತುವ ಕೆಲಸವನ್ನು ಅವರು ಮಾಡಿದರು. ಕಾರ್ಯಕರ್ತರನ್ನು ಬೆಂಬಲಿಸಿ ನಿಮ್ಮ ಹಿಂದೆ ನಾನು ಇದ್ದೇನೆ, ಸವಾಲಗಳನ್ನು ಎದುರಿಸಿ ಯಶ್ವಿಸಿಯಾಗಿರಿ ಎಂದು ಸದಾ ಹೇಳುತ್ತಿದ್ದ ರಾವಸಾಹೇಬ ಪಾಟೀಲ ಬೋರಗಾಂವ್ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಲವು ಸಂಘ ಸಂಸ್ಥೆಗಳನ್ನು ಸ್ಥಾಪಿಸಿದರು. ಬೋರಗಾಂವ ನಗರದ ಜತೆಗೆ ನಿಪ್ಪಾಣಿ ಕ್ಷೇತ್ರದ ಸವಾಂಗೀಣ ಅಭಿವೃದ್ಧಿಗೆ ಸದಾ ಪ್ರಯತ್ನಿಸಿದ್ದ ಅವರ ಈ ಗುಣದ ವೈಶಿಷ್ಠೈದಿಂದಾಗಿ ಕ್ಷೇತ್ರದ ಹಳ್ಳಿಗಳಲ್ಲಿ ಮಾತ್ರವಲ್ಲದೆ ಇಡೀ ಜಿಲ್ಲೆಯಲ್ಲೇ ತಮ್ಮ ಕಾರ್ಯಕರ್ತರ ಹುಮ್ಮಸ್ಸು ಮೂಡಿಸಿದ್ದಾರೆ. ಅಲ್ಲದೇ 40 ವರ್ಷಗಳ ನಿಪ್ಪಾಣಿ ತಾಲೂಕ ರಾಜಕೀಯದ ಘಟನಾವಳಿಗಳನ್ನು ಅವರು ಯಾವಾಗಲು ಹೇಳುತ್ತಿದ್ದ್ರು, ರಾಜಕೀಯದಲ್ಲಿ ಯಾರು ಏನು ಹೇಳಿದರು ಎಂಬ ನಿಖರ ಜ್ಞಾನ ಅವರಿಗಿತ್ತು ಎಂದರು.

ಜೈನ ಸಮುದಾಯದ ಪ್ರತಿಷ್ಠೆಯೆಂದು ಪರಿಗಣಿಸಲಾದ ದಕ್ಷಿಣ ಭಾರತ ಜೈನ ಸಭಾದ ಅಧ್ಯಕ್ಷರಾಗಿ ರಾವಸಾಹೇಬ ಪಾಟೀಲ ಕಳೆದ ನಾಲ್ಕು ದಶಕಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಸಂಸ್ಕೃತಿ, ಶಿಕ್ಷಣ ಮತ್ತು ಆರೋಗ್ಯ ಕ್ಕೆ ಒತ್ತು ನೀಡಿದ ಅವರು ಸಮಾಜದ ಪ್ರತಿ ಮಗು ಉನ್ನತ ಶಿಕ್ಷಣ ಪಡೆಯಲು ವಿದ್ಯಾರ್ಥಿ ವೇತನ ಯೋಜನೆಯನ್ನು ಕೈಗೊಂಡ ವ್ಯಕ್ತಿ ಇವರು. ಇಂದು ಈ ಸ್ಕಾಲರ್‌ಶಿಪ್ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಲಭ್ಯವಿದ್ದು, ಈ ಮೂಲಕ ಅನೇಕ ಜನರು ಶಿಕ್ಷಣ ಪಡೆದುಕೊಂಡಿದ್ದಾರೆ ಮತ್ತು ಬಡವರು ಆರೋಗ್ಯ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇಂತಹ ಕೆಲಸ ಮಾಡಿದ ದಿ. ರಾವಸಾಹೇಬ ಪಾಟೀಲ ಕಾರ್ಯ ಶ್ಲಾಘನೀಯವಾದಿದ್ದು ಎಂದರು.
ಇದೇ ವೇಳೆ ದಿ.ರಾವಸಾಹೇಬ ಪಾಟೀಲ ಅವರ ಪುತ್ರರಾದ ಅಭಿನಂದನ ಪಾಟೀಲ ಹಾಗೂ ಉತ್ತಮ ಪಾಟೀಲ ಅವರಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಸುನೀಲ ಹನಮನ್ನವರ, ಮಾಜಿ ಸಚಿವ ವೀರಕುಮಾರ ಪಾಟೀಲ, ಮಾಜಿ ಶಾಸಕ ಕಾಕಾಸಾಹೇಬ್‌ ಪಾಟೀಲ, ಬುಡಾ ಅಧ್ಯಕ್ಷ ಲಕ್ಷಣರಾವ್‌ ಚಿಂಗಳೆ, ಸಚಿವರ ಅಪ್ತ ಸಹಾಯಕ ಕಿರಣ ರಜಪುತ, ಪಂಕಜ ಪಾಟೀಲ ಸೇರಿದಂತೆ ಕಾಂಗ್ರೆಸ್‌ ಮುಖಂಡರು ಇದ್ದರು.**********************

Back to top button