ಪ್ರಕೃತಿ ಬೆಳಗಾವಿ

ವ್ಯಾಪಕ‌ ಮಳೆ: ಬೆಳಗಾವಿ, ಖಾನಾಪುರ ತಾಲ್ಲೂಕಿನ ಶಾಲೆಗಳಿಗೆ ಎರಡು ದಿನ ರಜೆ‌ ಘೋಷಣೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ, ಜುಲೈ 21: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ತಾಲ್ಲೂಕಿನಲ್ಲಿ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.22 ಮತ್ತು ಜು.23 ರಂದು ರಜೆ ಘೋಷಿಸಲಾಗಿದೆ.

ಅದೇ ರೀತಿ ಖಾನಾಪುರ ತಾಲ್ಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೂ ಜುಲೈ 22 ಮತ್ತು 23 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಎಲ್ಲಾ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ರಜೆ ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.*************************


Back to top button