ಪ್ರಕೃತಿ ಬೆಳಗಾವಿ
ಮತ್ತೊಮ್ಮೆ ಕೇಂದ್ರ ಸರ್ಕಾರದಿಂದ ಕರ್ನಾಟಕದ ಮೇಲೆ ಮಲತಾಯಿ ದೋರಣೆ ಮುಂದುವರಿಕೆ ಧ್ವನಿ ಎತ್ತದ & ನಿದ್ರೆಯಿಂದ ಏಳದ ಬಿಜೆಪಿ ಸಂಸದರು ವಿನಯ ನಾವಲಗಟ್ಟಿ…!!
ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ವಿನಯ ನಾವಲಗಟ್ಟಿ ಅವರು ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರ ಹೇಳಿಕೆಯಲ್ಲಿ, ಅವರು ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯವನ್ನು ನಿರ್ಲಕ್ಷಿಸಿರುವುದಾಗಿ, ಮಲತಾಯಿ ದೋರಣೆಯನ್ನು ಮುಂದುವರಿಸಿರುವುದಾಗಿ ಆರೋಪಿಸಿದರು.
“ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಕರ್ನಾಟಕಕ್ಕೆ ಪ್ರತ್ಯೇಕವಾಗಿ ಗಮನ ನೀಡಲಾಗಿಲ್ಲ. ನಮ್ಮ ರಾಜ್ಯಕ್ಕೆ ಹಕ್ಕುಗಳು ಮತ್ತು ಅನುದಾನದಲ್ಲಿ ಕಡಿತ ಮಾಡಲಾಗಿದೆ. ಈ ಬಗ್ಗೆ ಧ್ವನಿ ಎತ್ತಬೇಕಾದ ನಮ್ಮ ಬಿಜೆಪಿ ಸಂಸದರು ಮೌನವಾಗಿದ್ದಾರೆ,” ಎಂದು ವಿನಯ ನಾವಲಗಟ್ಟಿ ಹೇಳಿದರು.
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯು ಕೇಂದ್ರ ಸರ್ಕಾರದ ಈ ನೀತಿಯನ್ನು ತೀವ್ರವಾಗಿ ವಿರೋಧಿಸುತ್ತದೆ ಮತ್ತು ಕರ್ನಾಟಕದ ಜನರ ಹಿತಾಸಕ್ತಿಯನ್ನು ಕಾಪಾಡಲು ನಿರಂತರ ಹೋರಾಟ ನಡೆಸುತ್ತದೆ.
ವಿನಯ ನಾವಲಗಟ್ಟಿ
ಅಧ್ಯಕ್ಷರು, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ….






