ಪ್ರಕೃತಿ ಬೆಳಗಾವಿ

ವ್ಯಾಪಕ ಮಳೆ: ನಾಲ್ಕು ತಾಲ್ಲೂಕಿನಲ್ಲಿ ಜು.24 ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ, ಜು.23 : ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಅಂಗನವಾಡಿ, ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಅದೇ ರೀತಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.*************************

Back to top button