ಪ್ರಕೃತಿ ಬೆಳಗಾವಿ

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯವನ್ನು ಕಡೆಗಣಿಸಿದ ಕೇಂದ್ರ ಸರ್ಕಾರ – ಮಹೇಶ ಎಸ್ ಶಿಗೀಹಳ್ಳಿ ಯುವ ಹೋರಾಟಗಾರ…!!

ಪ್ರಕೃತಿ ಬೆಳಗಾವಿ ಸುದ್ದಿ : ಈ ಬಾರಿ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಬಂಪರ್ ಬಜೆಟ್ ಘೋಷಣೆ ಮಾಡುವ ನಿರೀಕ್ಷೆ ಮಾಡಲಾಗಿತ್ತು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ. ರೈತರಿಗೆ ಕಾರ್ಮಿಕರಿಗೆ ,ಬಡವರಿಗೆ ಹಿಂದುಳಿದ ಸಮುದಾಯದ ಜನರ ಪರವಾಗಿ ಕೇಂದ್ರ ಸರ್ಕಾರ ಒಳ್ಳೆಯ ಬಜೆಟ್ ಗೊಷಣೆ ಮಾಡುತ್ತಾರೆ ಎನ್ನುವ ಆತ್ಮವಿಶ್ವಾಸ ಇತ್ತು ಒಳ್ಳೆಯ ನಿರೀಕ್ಷೆ ಮಾಡಲಾಗಿತ್ತು.

ಆದರೆ ಕರ್ನಾಟಕ ರಾಜ್ಯದ ಜನರ ಪರವಾಗಿ ಅಭಿವೃದ್ಧಿಗಾಗಿ ಯಾವುದೆ ಒಳ್ಳೆಯ ಬಜೆಟ್ ಮಂಡನೆ ಮಾಡದೆ ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡಿದೆ ಇದು ಖಂಡನೀಯ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇಲ್ಲದಿರುವುದರಿಂದ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಮಲತಾಯಿ ಧೋರಣೆಯನ್ನು ಮಾಡಿದೆ ಎಂದು ಸಂಶಯವಾಗಿದೆ.

ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳ ಪರವಾಗಿ ನಿಲ್ಲಬೇಕು ಎಲ್ಲ ರಾಜ್ಯದ ಜನರ ಅಭಿವೃದ್ಧಿಗಾಗಿ ವಿಶೇಷ ಕಾಳಜಿ ವಹಿಸಿ ಬಜೆಟ್ ಮಂಡನೆ ಮಾಡಬೇಕು. ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದ ಜನರ ಪರವಾಗಿ ಚಿಂತನೆ ಮಾಡಬೇಕು ಕಾಳಜಿ ವಹಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಮಹೇಶ್ ಎಸ್ ಶಿಗಿಹಳ್ಳಿ ತಿಳಿಸಿದ್ದಾರೆ.*************************

Back to top button