ಪ್ರಕೃತಿ ಬೆಳಗಾವಿ

ಮಹಾ ಪರಿನಿರ್ವಾಣ ದಿನದ ನಿಮಿತ್ತ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾಾರ್ಚನೆ…!! 

ಪ್ರಕೃತಿ ಬೆಳಗಾವಿ ಸುದ್ದಿ : ಧಾರವಾಡ ಡಿಸೆಂಬರ 06 : ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆ ನಿಮಿತ್ತ ಇಂದು ಬೆಳಿಗ್ಗೆ ನಗರದ ಕಲಾಭವನ ಎದುರಿಗೆ ಇರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೇರಿದಂತೆ ಗಣ್ಯರಿಂದ ಮಾಲಾರ್ಪಣೆ, ಪುಷ್ಪಾಾರ್ಚನೆ ಕಾರ್ಯಕ್ರಮ ಜರುಗಿತು.

ನಂತರ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾಾರ್ಚನೆ ಮಾಡಿ, ಅವರು ನಮಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ತಹಶಿಲ್ದಾರ ಡಿ.ಎಚ್.ಹೂಗಾರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ.ಶುಭ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಮತ್ತು ಸಮಾಜದ ಪ್ರಮುಖರು ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.***********************

Back to top button