ಪ್ರಕೃತಿ ಬೆಳಗಾವಿ

ಹೊರಗುತ್ತಿಗೆ ಸಿಬ್ಬಂದಿಗೆ ಕಾಲಕಾಲಕ್ಕೆ ವೇತನ ಪಾವತಿಸಿ: ಸಿಇಒ ರಾಹುಲ್ ಶಿಂಧೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಹೊರಗುತ್ತಿಗೆ ಸಿಬ್ಬಂದಿಯನ್ನು ಅವರ ಕಾರ್ಯ ವೈಖರಿ ಆಧಾರದ ಮೇಲೆ‌ ಮುಂದುವರಿಸುವುದು. ಅವರಿಗೆ ಸರಿಯಾದ ವೇಳೆಗೆ ವೇತನ ಪಾವತಿಸಲು ಕ್ರಮಕೈಗೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಶನಿವಾರ (ಮಾ.16) ಜಿಲ್ಲಾ ಆರೋಗ್ಯ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಹೆಚ್ಚು ಹೆರಿಗೆಗಳು ದಾಖಲಾಗುವ ಆಸ್ಪತ್ರೆಗಳಲ್ಲಿ ಕೆಲವೊಂದು ಬಾರಿ ತಾಯಿ ಅವಶ್ಯವಿರುವ ರಕ್ತ ಒದಗಿಸಲು ರಕ್ತ ಸಂಗ್ರಹ ಘಟಕ ಸ್ಥಾಪಿಸಬೇಕು. ಈ ನಿಟ್ಟಿನಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳಲು ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.

ಲಸಿಕಾ ಅಧಿಕಾರಿ ಡಾ.ಚೇತನ್ ಕಂಕನವಾಡಿ ಮಾತನಾಡಿ, ಈಚೆಗೆ ಜರುಗಿದ ಪಲ್ಸ್ ಪೋಲಿಯೋ ಕಾರ‍್ಯಕ್ರಮದಲ್ಲಿ ಜಿಲ್ಲೆಯೂ ಶೇ.೧೦೦ ರಷ್ಟು ಪ್ರಗತಿ ಸಾಧಿಸಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಡಾ.ಮಹೇಶ್ ಕೋಣಿ, ಅಪರ ಜಿಲ್ಲಾ ಆರೋಗ್ಯ ಅಧಿಕಾರಿ ಎಸ್.ಎಸ್. ಗಡೇದ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.*****************************

Back to top button