ಪ್ರಕೃತಿ ಬೆಳಗಾವಿ

ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿಗೆ ಭೂಮಿ ಪೂಜೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಜ್ಯೋತಿ ನಗರದಲ್ಲಿ ಮಸೋಬಾ ರಾಸಾಯಿ ದೇವಸ್ಥಾನದ ಜೀರ್ಣೋದ್ಧಾರದ ಕಾಮಗಾರಿಗೆ ಕಾಡಾ ಅಧ್ಯಕ್ಷ ಯುವರಾಜ ಕದಂ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ದೇವಸ್ಥಾನ ಜೀರ್ಣೋದ್ಧಾರಗೊಳ್ಳಲಿದೆ. ಈ ವೇಳೆ ಸ್ಥಳೀಯ ನಿವಾಸಿಗಳು, ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.********************************

Back to top button