ಪ್ರಕೃತಿ ಬೆಳಗಾವಿ

ಸುತ್ತೋಲೆಯ ನಿಯಮ ಪಾಲಿಸದ ಪೋಲಿಸರು…!!

ಪ್ರಕೃತಿ ಬೆಳಗಾವಿ ಸುದ್ದಿ : ಹುಕ್ಕೇರಿ : ಸರ್ಕಾರದ ಸುತ್ತೋಲೆಯನ್ನು ನಿಯಮ ಪಾಲಿಸದೆ ಹುಕ್ಕೇರಿ ಪೋಲಿಸರು ಇಂದು ಸ್ಥಳೀಯ ಕ್ಯಾರಗುಡ್ಡ ಹತ್ತಿರ ರಸ್ತೆ ಬದಿಗೆ ನಿಂತು ವಾಹನ ಸವಾರರ ವಾಹನಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಪರೀಕ್ಷಿಸಲು ಸಕಾರಣವಿಲ್ಲದೇ ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದು ಇದರಿಂದ ವಾಹನ ಸವಾರರು ನಮಗೆ ತುಂಬಾ ತೊಂದರೆ ಆಗುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ರಾಜ್ಯದ ಎಲ್ಲಾ ಘಟಕಗಳಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ವಾಹನಗಳನ್ನು ತಪಾಸಣೆ ನಡೆಸುವಾಗ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾ ನಿರೀಕ್ಷಕ ಡಾ. ಎಂ.ಎ. ಸಲೀಂ ಸುತ್ತೋಲೆ ಹೊರಡಿಸಿದ್ದಾರೆ.

ಪೊಲೀಸರು ವಾಹನ ಸವಾರರ ವಾಹನಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಪರೀಕ್ಷಿಸಲು ಸಕಾರಣವಿಲ್ಲದೇ ವಾಹನಗಳನ್ನು ತಡೆದು ತಪಾಸಣೆಗೊಳಪಡಿಸಬಾರದು.ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಇತರೆ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಅತಿ ವೇಗವಾಗಿ ಚಲಿಸುವ ವಾಹನಗಳನ್ನು ತಡೆಯುವ ಪ್ರಯತ್ನ ಮಾಡಬಾರದು.ಅಡ್ಡ ಬಂದು ವಾಹನ ನಿಲ್ಲಿಸುವಂತೆ ಹೇಳಬಾರದು ರಸ್ತೆಯಲ್ಲಿ ದಿಢೀರನೆ ಅಡ್ಡ ಬಂದು ವಾಹನ ನಿಲ್ಲಿಸುವಂತೆ ಹೇಳಬಾರದು ಹಾಗೂ ಬೈಕ್‌ನ ಹಿಂಬದಿ ಸವಾರನನ್ನು ಹಿಡಿದು ಎಳೆಯುವುದು ಹಾಗೂ ವಾಹನಗಳ ಕೀಲಿಕೈ (Key) ಅನ್ನು ತೆಗೆದುಕೊಳ್ಳುವುದನ್ನು ಮಾಡಬಾರದು.

ಈ ಎಲ್ಲಾ ಅಂಶಗಳನ್ನು ಎಲ್ಲಾ ಪೊಲೀಸ್ ಅಧಿಕಾರಿಗಳು / ಸಿಬ್ಬಂದಿಗಳು ಗಮನದಲ್ಲಿಟ್ಟುಕೊಂಡು ಕಡ್ಡಾಯವಾಗಿ ಪಾಲಿಸುವುದು. ವಾಹನಗಳನ್ನು ತಡೆಯಬಾರದು ಎಂದು ಸೂಚನೆ ನೀಡಿದ್ದಾರೆ.

ಪೋಲಿಸರಿಗೆ ಪೋಲಿಸ ಮಹಾ ನೀರಿಕ್ಷಕರು ಸುತ್ತೋಲೆಯನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಕಟ್ಟು ನಿಟ್ಟಾಗಿ ನಿರ್ದೇಶನಗಳನ್ನು ನೀಡಿದರು ಸಹ ಹುಕ್ಕೇರಿ ಪೋಲಿಸ್ ಇಲಾಖೆಯು ನಿಯಮಗಳು ಗಾಳಿಗೆ ತೂರಿದಂತಾಗಿದೆ.ಜಿಲ್ಲಾ ವರಿಷ್ಠಾಧಿಕಾರಿಗಳು ನಿಯಮಗಳು ಪಾಲಿಸುವಂತೆ ಹುಕ್ಕೇರಿ ಪೋಲಿಸರಿಗೆ ಖಡಕ ಸೂಚನೆ ನೀಡುತ್ತಾರೆ ಎಂದು ಕಾದುನೋಡಬೇಕು.****************************

Back to top button