ಪ್ರಕೃತಿ ಬೆಳಗಾವಿ

ಅಥಣಿ ಪೊಲೀಸ್ ಠಾಣೆ ಮುಂದೆ ಡಿಸಿಸಿ ಬ್ಯಾಂಕ್ ನೌಕರರ ಪ್ರತಿಭಟನೆ.‌..!!

ಸವದಿ ವಿರುದ್ಧ ಧಿಕ್ಕಾರ – ಪೊಲೀಸ್ ಕ್ರಮಕ್ಕೆ ಆಗ್ರಹ.‌..

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ/ ಅಥಣಿ : ಮಾಜಿ‌ ಡಿಸಿಎಂ ಹಾಲಿ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಡಿಸಿಸಿ ಬ್ಯಾಂಕ್ ನೌಕರರು ಶುಕ್ರವಾರ ರಾತ್ರಿವೇಳೆ ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿ ಭಾರೀ ಪ್ರತಿಭಟನೆ ನಡೆಸಿದರು.

ನಗರದ ಪ್ರಮುಖ ರಸ್ತೆ ಮೂಲಕ ಮೆರವಣಿಗೆ ನಡೆಸಿದ ನೌಕರರು, ಸವದಿ ಕುಟುಂಬದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೋರ ಹಾಕಿದರು. ಬಳಿಕ ಅಥಣಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪೊಲೀಸರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ನ್ಯಾಯ ದೊರಕುವವರೆಗೆ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದರು. ಈ ವೇಳೆ ಡಿಸಿಸಿ ಬ್ಯಾಂಕ್ ನೌಕರ ಸಂಘದ ಮುಖಂಡರು ಮಾತನಾಡಿ, ಬ್ಯಾಂಕ್ ಸಿಬ್ಬಂದಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ, ಆರೋಪಿಗಳ ವಿರುದ್ಧ ಕಾನೂನು ಕ್ರಮ ಅನಿವಾರ್ಯವೆಂದು ಹೇಳಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಅಥಣಿ ಪೊಲೀಸ್ ಠಾಣೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬಳಿಕ ನೌಕರರು ತಮ್ಮ ಬೇಡಿಕೆಗಳ ಕುರಿತ ಮನವಿ ಪತ್ರವನ್ನು ಅಥಣಿ ಪೊಲೀಸರಿಗೆ ಸಲ್ಲಿಸಿದರು.*********************************

Back to top button