ಪ್ರಕೃತಿ ಬೆಳಗಾವಿ

ಬಾಯ್ಲರ್ ಅಪಘಾತದಲ್ಲಿ ದುರ್ಮರಣ ಯುವಕನ ಶವ ಬೈಲಹೊಂಗಲ ಚೆನ್ನಮ್ಮ ವೃತ್ತದಲ್ಲಿಟ್ಟು ಪ್ರತಿಭಟನೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಅವಘಡದಲ್ಲಿ ದುರ್ಮರಣ ಹೊಂದಿದ ಘಟನೆಗೆ ಸಂಬಂಧಿಸಿದಂತೆ ಆಕ್ರೋಶಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯರು ಗುರುವಾರ ಬೈಲಹೊಂಗಲ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಮೃತ ಯುವಕನ ಶವ ಇಟ್ಟು ಪ್ರತಿಭಟನೆ ನಡೆಸಿದರು.

ಮೃತಪಟ್ಟ ಯುವಕ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಬಾಯ್ಲರ್ ಏಕಾಏಕಿ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎನ್ನಾಲಾಗಿದೆ.
ಘಟನೆಗೆ ಕಾರ್ಖಾನೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಕಾರ್ಮಿಕರ ಜೀವದೊಂದಿಗೆ ಆಟವಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾರ್ಖಾನೆ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಮೃತನ ಕುಟುಂಬಕ್ಕೆ ಸಮರ್ಪಕ ಪರಿಹಾರ ನೀಡಬೇಕು ಹಾಗೂ ಕುಟುಂಬದ ಸದಸ್ಯನೊಬ್ಬರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಿಂದ ಚನ್ನಮ್ಮ ವೃತ್ತದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಸಂಬಂಧಪಟ್ಟ ಅಧಿಕಾರಿಗಳಿಂದ ಸೂಕ್ತ ಪರಿಹಾರದ ಭರವಸೆ ದೊರೆತ ಬಳಿಕ ಪ್ರತಿಭಟನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.*************************

Back to top button