ಪ್ರಕೃತಿ ಬೆಳಗಾವಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ…!!

ಪ್ರಕೃತಿ ಬೆಳಗಾವಿ ಸುದ್ದಿ : ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಲೋಳಸುರ ಗ್ರಾಮದ ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರು ಹಾಗೂ ಸಿದ್ದಪ್ಪಾ ನಿಡಗುಂದಿ. ಮನೋಹರ ಗಡಾದ. ಹಾಲಪ್ಪಾ ಬಾಗಾಯಿ. ಯಮನಪ್ಪಾ ಬಾಗಾಯಿ. ಸಿದ್ದಪ್ಪಾ ವಿ ನಿಡಗುಂದಿ. ಹಾಲಪ್ಪಾ ಬಾಗಿ. ಮದೆಪ್ಪಾ ಪೂಜೇರಿ ಗ್ರಾಮದ ಹಿರಿಯರು ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.*******************************






