ಪ್ರಕೃತಿ ಬೆಳಗಾವಿ

ಬೈಲಹೊಂಗಲನಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ನ ಹಾವಳಿ ಹೆಚ್ಚಾಗುತ್ತಲೆ ಇದೆ. ಅನೇಕ ಫೈನಾನ್ಸ್ ಗಳು ಸಾಲವನ್ನು ನೀಡಿ, ಸಾಲ ಪಡೆದವರ ವ್ಯಕ್ತಿಕ ಮಾಹಿತಿಗಳನ್ನು ಸಂಗ್ರಹಿಸಿ ಸಾಲ ಪಡೆದರ ಸಂಬಂಧಿಕರಿಗೆ ಹಾಗೂ ಗ್ರಾಮಸ್ಥರಿಗೆ ಪೋಟೋ ಗಳನ್ನು ಹರಿ ಬಿಟ್ಟು ಕಿರುಕುಳ ನೀಡುತ್ತಿರುವುದಲ್ಲದೆ ಮನೆಗಳಿಗೆ ಹೋಗಿ ಗಲಾಟೆ ಮಾಡಿ ಅಪಮಾನ ಮಾಡಲಾಗುತ್ತಿದೆ. ಇದರಿಂದಾಗಿ ಬೇಸತ್ತು ಬೈಲಹೊಂಗಲ ತಾಲೂಕಿ ಅನಿಗೋಳ ಗ್ರಾಮದ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಗೌರವ್ವ ನೀಲಪ್ಪ ಕೆಂಗಾನೂರು (36) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಗುರುತಿಸಲಾಗಿದೆ. ಜೀವನ ನಿರ್ವಹಣೆಗಾಗಿ ಗೌರವ್ವ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ 7ರಿಂದ 10 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ನಿರಂತರ ಕಿರುಕುಳ ನೀಡಲಾಗುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

DMI ಪೈನಾನ್ಸ್, HDB ಹಾಗೂ ಸಂಘ ಸಂಸ್ಥೆಗಳು ಸೇರಿದಂತೆ ಮೈಕ್ರೋ ಫೈನಾನ್ಸ್ ಗಳ ವಿರುದ್ದ ಸರಕಾರ ಕೂಡಲೇ ಕ್ರಮ ಕೈಗೊಳಬೇಕೆಂದು ಕುಟುಂಬಸ್ಥರು ಹಾಗೂ ಅನಿಗೋಳ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗೌರವ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರು ಘಟನಾ ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಬೇಟಿ ನೀಡಿ ಘಟನೆಯ ಕುರಿತು ಮಾಹಿತಿ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.****************************

Back to top button