ಪ್ರಕೃತಿ ಬೆಳಗಾವಿ
*ತಡರಾತ್ರಿ ವೇಳೆ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಅಪಮಾನ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಯಾರೋ ಕಿಡಗೆಡಿಗಳು ತಡ ರಾತ್ರಿ ವೇಳೆ ಮಚ್ಚೆ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಯಾವದೋ ಪದಾರ್ಥವನ್ನು ಹಚ್ಚಿ ಅಪಮಾನ ಮಾಡಿರುವ ಕುರಿತು ದೂರು ಬಂದಿದ್ದು,
ದೂರನ ಕೂಡಲೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನೆಡೆಸಿದ್ದಾರೆ.
ಪ್ರತಿಮೆಯ ಮೇಲಿದ್ದ ಪದಾರ್ಥದ ಮಾದರಿಯನ್ನು ಸಂಗ್ರಹಿಸಿ ಫೊರೆನ್ಸಿಕ್ ಪರೀಕ್ಷೆಗೆ ಕಳುಹಿಸಲಾಗಿದೆ.
ಸ್ಥಳದ ಸಮೀಪದಲ್ಲೇ ಸುಮಾರು 10 ಮೀಟರ್ ದೂರದಲ್ಲಿ ಸಿಸಿಟಿವಿ ಕ್ಯಾಮೆರಾ ಇರುವುದರಿಂದ ಅದರ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಕೃತ್ಯದ ಬಗ್ಗೆ ದೂರುದಾರರನ್ನು ವಿಚಾರಣೆಗೊಳಪಡಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.********************************






