*ಬೆಳಗಾವಿಯಲ್ಲಿ ಹನಿಟ್ರ್ಯಾಪ್ ಗ್ಯಾಂಗ್ ಬಯಲು: ಫ್ಯಾಶನ್ ಡಿಸೈನರ್ ದೀಪಾ ಅವಟಗಿ ಬಂಧನ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಸೋಶಿಯಲ್ ಮೀಡಿಯಾ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಪರಿಚಯಿಸಿಕೊಂಡು ಹನಿಟ್ರ್ಯಾಪ್ ನಡೆಸುತ್ತಿದ್ದ ಫ್ಯಾಶನ್ ಡಿಸೈನರ್ ದೀಪಾ ಅವಟಗಿ (33) ಯನ್ನು ಟಿಳಕವಾಡಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದ ಈಕೆ, ಹುಕ್ಕೇರಿ ತಾಲೂಕಿನ ಶಿವಾನಂದ್ ಮಠಪತಿ ಎಂಬಾತನ ಸಹಾಯದಿಂದ ಉದ್ಯಮಿಗಳನ್ನು ಟಾರ್ಗೆಟ್ ಮಾಡುತ್ತಿದ್ದಳು.
ದೀಪಾ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಮೂಲಕ ಶ್ರೀಮಂತರೊಂದಿಗೆ ಪರಿಚಯ ಮಾಡಿಕೊಂಡು, ನಂತರ ಆಪ್ತವಾಗಿ ಮಾತನಾಡಿ ಲಾಡ್ಜ್‌ಗೆ ಕರೆಸಿಕೊಳ್ಳುತ್ತಿದ್ದಳು. ವ್ಯಕ್ತಿ ಸ್ನಾನಕ್ಕೆ ಹೋದ ಸಂದರ್ಭದಲ್ಲಿ ಅವರ ಮೊಬೈಲ್, ಹಣ ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಕದ್ದುಕೊಂಡು ಪರಾರಿಯಾಗುತ್ತಿದ್ದಳು. ಬಳಿಕ ಹಣ ಕೊಡದಿದ್ದರೆ ಅಸಭ್ಯವಾಗಿ ವರ್ತಿಸಿದ್ದಾರೆಂದು ದೂರು ನೀಡುವುದಾಗಿ ಬೆದರಿಕೆ ಹಾಕುತ್ತಿದ್ದರೆಂದು ತಿಳಿದುಬಂದಿದೆ.
ಈ ಕಾರ್ಯಾಚರಣೆಯನ್ನು ಇನ್‌ಸ್ಪೆಕ್ಟರ್ ಪರಶುರಾಮ್ ಪೂಜೇರಿ ನೇತೃತ್ವದಲ್ಲಿ ನಡೆಸಲಾಗಿದ್ದು, ಪರಾರಿಯಾಗಿರುವ ಸಹಆರೋಪಿ ಶಿವಾನಂದ್ ಮಠಪತಿ ಬಂಧನಕ್ಕಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.ಬೆಳಗಾವಿಯಲ್ಲಿ ಹನಿಟ್ರ್ಯಾಪ್ ಗ್ಯಾಂಗ್ ಬಯಲು: ಫ್ಯಾಶನ್ ಡಿಸೈನರ್ ದೀಪಾ ಅವಟಗಿ ಬಂಧನ.
ಉದ್ಯಮಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿ ಬೆಳಗಾವಿಯ ಹೋಟೆಲ್‌ನಲ್ಲಿ ದೀಪಾಳನ್ನು ಬಂಧಿಸಿದ್ದಾರೆ. ಆರೋಪಿಯಿಂದ ಒಂದು ಫಾರ್ಚುನ್ ಕಾರು, ಮಾರುತಿ ಸುಜುಕಿ ಎಸ್-ಕ್ರಾಸ್ ಕಾರು, 11 ಮೊಬೈಲ್ ಫೋನ್, ಒಂದು ಟ್ಯಾಬ್, ಡೊಂಗಲ್, ಮೂರು ಕಾರ್ ಕೀ ಹಾಗೂ ₹14 ಸಾವಿರ ನಗದು ಸೇರಿ ಒಟ್ಟು ₹32.86 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಕಾರ್ಯಾಚರಣೆಯನ್ನು ಇನ್‌ಸ್ಪೆಕ್ಟರ್ ಪರಶುರಾಮ್ ಪೂಜೇರಿ ನೇತೃತ್ವದಲ್ಲಿ ನಡೆಸಲಾಗಿದ್ದು, ಪರಾರಿಯಾಗಿರುವ ಸಹ ಆರೋಪಿ ಶಿವಾನಂದ್ ಮಠಪತಿ ಬಂಧನಕ್ಕಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.****************************





