*ತಮಿಳುನಾಡು ಚುನಾವಣಾ ಪ್ರಚಾರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

*ಕೊಯಮತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ*
ಪ್ರಕೃತಿ ಬೆಳಗಾವಿ ಸುದ್ದಿ : ಕೊಯಮತ್ತೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ತಮಿಳುನಾಡು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೊಯಮತ್ತೂರಿನ ತೊಪ್ಪಂಪಟ್ಟಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೂರ್ಯ ಪ್ರಕಾಶ್ ಪರ ಪ್ರಚಾರ ನಡೆಸಿದರು.
ಭಾನುವಾರ ರಾತ್ರಿ ರೋಡ್ ಶೋ ನಡೆಸಿದ ಸಚಿವರು, ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಕಾಂಗ್ರೆಸ್ ಹಿಂದುಳಿದ, ಬಡವರ, ಮಹಿಳೆಯರ ಹಾಗೂ ಯುವಕರ ಪರವಾಗಿರುವ ಪಕ್ಷ, ತತ್ವ ಸಿದ್ದಾಂತದ ಮೇಲೆ ನಂಬಿಕೆ ಇಟ್ಟಿರುವ ಪಕ್ಷ ಎಂದರು.
* *ಸ್ಥಳೀಯ ಮುಖಂಡರೊಂದಿಗೆ ಸಚಿವರ ಸಭೆ*
ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಾರ್ಥವಾಗಿ ಕೊಯಮತ್ತೂರಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಸಚಿವರನ್ನು ಸನ್ಮಾನಿಸಿದರು. ಇದೇ ವೇಳೆ ಚುನಾವಣೆಯ ರೂಪುರೇಷೆಗಳನ್ನು ಒಳಗೊಂಡಂತೆ ಪಕ್ಷದ ಕಾರ್ಯ ಚಟುವಟಿಕೆಗಳ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸಿದರು.
ಈ ವೇಳೆ ಎಐಸಿಸಿ ಸದಸ್ಯರಾದ ವಿ.ಎಂ.ಸಿ ಮನೋಹರನ್, ಆರ್.ಎಲ್, ಕಣ್ಣನ್, ಸ್ಥಳೀಯ ಕಾರ್ಪೋರೇಟರ್ ನವೀನ್ ಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಕ್ಷಯ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.*******************************






