ಪ್ರಕೃತಿ ಬೆಳಗಾವಿ

*ಎಂ.ಅರವಿಂದ ಅವರಿಗೆ ಧಾರವಾಡ ಜಿಲ್ಲಾಮಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಪ್ರದಾನ*

ಪ್ರಕೃತಿ ಬೆಳಗಾವಿ ಸುದ್ದಿ : ಧಾರವಾಡ ಏ.18: ಪ್ರಸಕ್ತ ಸಾಲಿನ ಧಾರವಾಡ ಜಿಲ್ಲಾಮಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತದಿಂದ ನೀಡಲಾಗುವ ಉತ್ಕೃಷ್ಟ ಸಮಾಜಸೇವಾ ಪ್ರಶಸ್ತಿಯನ್ನು ಸಮಾಜಸೇವಕ ಎಂ. ಅರವಿಂದ ಅವರಿಗೆ ಪ್ರದಾನಿಸಲಾಯಿತು.

ಇಂದು ಬೆಳಿಗ್ಗೆ ಧಾರವಾಡ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಅವರು ಪ್ರಶಸ್ತಿ ನೀಡಿ, ಗೌರವಿಸಿದರು.

ಸಮಾಜದ ಹಿಂದುಳಿದ ವರ್ಗಗಳ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಜನಪರ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಎಂ. ಅರವಿಂದ ಅವರ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.*******************************

Back to top button