*ಮಹಾತ್ಮಾ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯ ಕನಸು ನನಸಾಗಿಸಲು ಗ್ರಾಮ ಆಡಳಿತಕ್ಕೆ ಹೆಚ್ಚಿನ ಒತ್ತು : ಸಚಿವ ಸತೀಶ ಜಾರಕಿಹೊಳಿ*

*ರಾಷ್ಟ್ರೀಯ ಪಂಚಾಯತ ರಾಜ್ ದಿನಾಚರಣೆ-2026*
ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ, ಏ.25 : ಗ್ರಾಮಗಳ ಸಮಗ್ರ ಅಭಿವೃದ್ಧಿಗಾಗಿ ಸರಕಾರಗಳಿಂದ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಗಳು ತಳ ಮಟ್ಟದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಪಂಚಾಯತ ರಾಜ್ ಇಲಾಖೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು.
ಸುವರ್ಣ ವಿಧಾನ ಸೌಧದ ಸೆಂಟ್ರಲ್ ಹಾಲನಲ್ಲಿ ಶನಿವಾರ(ಏ.25) ಜರುಗಿದ ರಾಷ್ಟ್ರೀಯ ಪಂಚಾಯತ ರಾಜ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜನರಿಂದ ಜನರಿಗಾಗಿ ನಡೆಯುವ ಆಡಳಿತ ಗ್ರಾಮ ಮಟ್ಟದಲ್ಲೇ ಆರಂಭವಾಯಿತು.
ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್
ಈ ಮೂರು ಹಂತಗಳ ವ್ಯವಸ್ಥೆಯಡಿ ಗ್ರಾಮಗಳ ಅಭಿವೃದ್ಧಿಗೆ ಬಲವಾದ ಅಡಿಪಾಯ ಹಾಕಲಾಗಿದೆ ಎಂದರು.
ಗ್ರಾಮಗಳ ಅಭಿವೃದ್ದಿಗಾಗಿ ಸರಕಾರ ಸದಾ ಬದ್ಧವಾಗಿದೆ. ಮಹಾತ್ಮಾ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸಾಗಿಸಲು ರಾಜ್ಯ ಸರಕಾರವು ಗ್ರಾಮ ಆಡಳಿತಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ತಿಳಿಸಿದರು.
ಗ್ರಾಮಗಳ ಸಬಲೀಕರಣದಲ್ಲಿ ಸ್ಥಳೀಯ ಆಡಳಿತಗಳು ಉತ್ತಮವಾಗಿ ಕಾರ್ಯ ನಿರ್ವಹಿಸಬೇಕು. ಭಾರತ ದೊಡ್ಡ ರಾಷ್ಟ್ರವಾಗಿದೆ. ಇಲ್ಲಿನ ಜನಸಂಖ್ಯೆಗೆ ಅನುಗುಣವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಶಾಸಕಾಂಗ ಹಾಗೂ ಕಾರ್ಯಾಂಗದ ನಡುವೆ ಸಮನ್ವಯ ಮುಖ್ಯವಾಗಿದೆ.
ಸರಕಾರ ಜಸರಿಗೊಳಿಸಿದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿವಲ್ಲಿ ಜಿಲ್ಲೆ ಮುಂಚೂಣಿಯಲ್ಲಿದೆ. ಜಿಲ್ಲೆಯ ಅಧಿಕಾರಿಗಳು ಕಾನೂನು ವ್ಯಾಪ್ತಿಯಲ್ಲಿ ತಮ್ಮ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಅಧಿಕಾರಿಗಳು ತಮ್ಮ ಅವಧಿಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವುದರ ಮೂಲಕ ಜನರ ಮನದಲ್ಲಿ ಶಾಶ್ವತಾವಗಿ ಉಳಿಯುವಂತೆ ಕಾರ್ಯ ನಿರ್ವಹಿಸಲು ಸಚಿವರಾದ ಸತೀಶ ಜರಾಕಿಹೊಳಿ ಅವರು ಕರೇ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರು ಮಾತನಾಡಿ ಮಹಾತ್ಮಾ ಗಾಂಧೀಜಿ ಅವರು ಕಂಡಂತಹ ಗ್ರಾಮ ಸ್ವರಾಜ್ಯ ಹಾಗೂ ಮಹಿಳಾ ಸಬಲೀಕರಣದಲ್ಲಿ ಪಂಚಾಯತ್ ರಾಜ್ ಇಲಾಖೆ ಪಾತ್ರ ಮಹತ್ವದಾಗಿದೆ.
ಜಿಲ್ಲಾ ಪಂಚಾಯತ ಸರಕಾರದ ಆಧಾರ ಸ್ತಂಭವಾಗಿದೆ. ಗ್ರಾಮ ಪಂಚಾಯತಗಳ ಮೂಲಕ ಬೇರು ಮಟ್ಟದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಪಂಚಾಯತ ರಾಜ್ ಪಾತ್ರ ಬಹು ದೊಡ್ಡದಾಗಿದೆ. ಮನುಷ್ಯನ ಹುಟ್ಟಿನಿಂದ ಸಾವಿನ ವರೆಗೆ ಪಂಚಾಯತ ರಾಜ್ ಇಲಾಖೆ ಕಾರ್ಯ ನಿರ್ವಹಿಸುತ್ತದೆ.
ಯಾವುದೇ ಗ್ರಾಮಗಳ ಅಭಿವೃದ್ಧಿಯಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಬಹು ಮುಖ್ಯವಾಗಿದೆ. ಕ್ಷೇತ್ರದ ಅಭಿವೃದ್ಧಿಯಲ್ಲಿ ಸದಾ ಕೈಜೋಡಿಸುವ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸರಕಾರ ಯೋಜನೆಗಳನ್ನು ಬೆಂಗಳೂರು, ದೆಹಲಿ ಮಟ್ಟದಲ್ಲಿ ರೂಪಿಸುತ್ತವೆ. ಸರಕಾರ ರೂಪಿಸುವಂತಹ ಯೋಜನೆಗಳನ್ನು ತಳ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಸರಕಾರಕ್ಕೆ ಒಳ್ಳೆಯ ಹೆಸರನ್ನು ತರುವಂತಹ ಕಾರ್ಯವಾಗಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಅಧಿಕಾರಿಗಳಿಗೆ ಕರೇ ನೀಡಿದರು.
ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರು ಮಾತನಾಡಿ ಗ್ರಾಮಗಳು ಸುಧಾರಣೆಯಾದಲ್ಲಿ ದೇಶ ಸುಧಾರಣೆಯಾಗುತ್ತದೆ ಎಂಬ ಮಹಾತ್ಮಾ ಗಾಂಧಿಜಿಯವರ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ದಿಟ್ಟ ಹೆಜ್ಜೆಯನ್ನಿಟಿದೆ. ಪಂಚಾಯತ ರಾಜ್ ವ್ಯವಸ್ಥೆಯಲ್ಲಿ ಗ್ರಾಮೀಣ ಜನರಿಗೆ ಆಡಳಿತಾತ್ಮಕ ಹಕ್ಕನ್ನು ನೀಡಲಾಗಿದೆ. ಗ್ರಾಮ ಪಂಚಾಯತ ಕಟ್ಟಡವು ಗ್ರಾಮದ ಸಂಸತ್ ಆಗಿದ್ದು ಗಾಂಧೀಜಿಯವರ ಕನಸನ್ನು ನನಸಾಗಿಸಲು ಮುಂದಾಗಬೇಕು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ಬೆಳಗಾವಿ ಜಿಲ್ಲಾ ಪಂಚಾಯತಗೆ ಹೊಸ ದೃಷ್ಟಿಕೋನವನ್ನು ನೀಡಿದ್ದಾರೆ ಎಂದು ಅವರ ಕಾರ್ಯ ವೈಖರಿಯನ್ನು ಶ್ಲಾಘೀಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ಮಾತನಾಡಿ ಪಂಚಾಯತ ರಾಜ್ ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿಗಳನ್ನು ಗುರುತಿಸುವ ಕಾರ್ಯಕ್ರಮವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ, ಶಾಸಕರುಗಳಾದ ಬಾಬಾಸಾಹೇಬ ಪಾಟೀಲ, ಗಣೇಶ ಹುಕ್ಕೇರಿ, ಆಸೀಪ್(ರಾಜು)ಸೇಠ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಸಂಜಯ ಶೆಟ್ಟಣ್ಣವರ, ಪೋಲಿಸ್ ಆಯುಕ್ತರಾದ ಬೋರಸೆ ಗುಲಾಬರಾವ್ ಭೂಷಣ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಗಳಾದ ಬಸವರಾಜ ಹೆಗನಾಯಕ, ಬಸವರಾಜ ಅಡವಿಮಠ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಯೋಜನಾಧಿಕಾರಿ ರವಿ ಬಂಗಾರಪ್ಪನವರ, ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಸವರಾಜ ಹೆಗನಾಯಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂಧರ್ಬದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪ್ರಾರ್ಥನಾ ಪಾಟೀಲ ಅವರನ್ನು ಹಾಗೂ ಪಂಚಾಯತ ರಾಜ್ ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗಣ್ಯರುಗಳು ಸನ್ಮಾನಿಸಿ ಗೌರವಿಸಿದರು.********************************











