*ಕೋಳಿಕೊಪ್ಪ ಜಾತ್ರೆ ಅದ್ಧೂರಿ ಆರಂಭ: ಉಡಿ ಸೇವೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಕೋಳಿಕೊಪ್ಪ ಗ್ರಾಮದ ಶ್ರೀ ಗ್ರಾಮದೇವಿಯ ಜಾತ್ರಾ ಮಹೋತ್ಸವ ಭಕ್ತಿಭಾವ ಮತ್ತು ಅದ್ಧೂರಿಯ ನಡುವೆ ಜರುಗಿತು. 11 ವರ್ಷಗಳ ಬಳಿಕ ನಡೆಯುತ್ತಿರುವ ಈ ಜಾತ್ರೆಯಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ದೇವಿಯ ಆಶೀರ್ವಾದ ಪಡೆದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಉಡಿತುಂಬಿದರು. ಈ ಸಂದರ್ಭದಲ್ಲಿ ವಿಧಾನ ಪರಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗ್ರಾಮಸ್ಥರು ಮತ್ತು ಭಕ್ತರು ಭಾರೀ ಸಂಖ್ಯೆಯಲ್ಲಿ ಸೇರಿ ಜಾತ್ರೆಯನ್ನು ಸಂಭ್ರಮದ ವಾತಾವರಣದಲ್ಲಿ ಆಚರಿಸಿದರು.
ಗ್ರಾಮದ ಪ್ರತಿಯೊಂದು ಮನೆಯಲ್ಲೂ ಹಬ್ಬದ ಸಂಭ್ರಮ ಕಂಡುಬಂದಿದ್ದು, ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿಸಲ್ಪಟ್ಟವು. ಜಾತ್ರೆಯ ಅಂಗವಾಗಿ ಪೂಜೆ, ಹರಕೆ, ಉಡಿ ಸೇವೆ ಸೇರಿದಂತೆ ಹಲವು ಆಚರಣೆಗಳು ನಡೆದವು.
ಗ್ರಾಮಸ್ಥರು, ಹಿರಿಯರು, ಯುವಕರು ಮತ್ತು ಮಹಿಳೆಯರು ಸಮಾನವಾಗಿ ಪಾಲ್ಗೊಂಡು ಜಾತ್ರೆಯನ್ನು ಯಶಸ್ವಿಗೊಳಿಸಿದರು. ಹಲವು ವರ್ಷಗಳ ಬಳಿಕ ನಡೆಯುತ್ತಿರುವ ಈ ಜಾತ್ರೆ ಗ್ರಾಮದಲ್ಲಿ ವಿಶೇಷ ಉತ್ಸಾಹ ಮೂಡಿಸಿದೆ.********************************






