ಪ್ರಕೃತಿ ಬೆಳಗಾವಿ

*ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಹಂಗರಗಾ ಗ್ರಾಮದ ರಾಜು ಭರ್ಮಾ ಪಾಟೀಲ ಅವರ ಮನೆಗೆ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ, ಇಡೀ ಮನೆ ಹಾಗೂ ಮನೆಯಲ್ಲಿದ್ದ ಸಾಮಗ್ರಿಗಳು ಸುಟ್ಟು ಭಸ್ಮವಾಗಿರುವ ಹಿನ್ನೆಲೆಯಲ್ಲಿ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಆರ್ತಿಕ ನೆರವು ನೀಡಲಾಯಿತು.

ಮಗಳ ಮದುವೆಗೆಂದು ಮನೆಯಲ್ಲಿ ಧವಸ- ಧಾನ್ಯ, ಹಣ ಸೇರಿದಂತೆ ಸಾಕಷ್ಟು ವಸ್ತುಗಳನ್ನು ಕೂಡಿಡಲಾಗಿತ್ತು. ಆ ವಸ್ತುಗಳೆಲ್ಲಾ ಬೆಂಕಿಗೆ ಆಹುತಿಯಾಗಿರುವುದು ಆ ಕುಟುಂಬವನ್ನು ಬೀದಿಗೆ ತಳ್ಳಿದೆ.

ಈ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಮ್ಮ ಆಪ್ತ ಕಚೇರಿ ಸಿಬ್ಬಂದಿ ಹಾಗೂ ಸ್ಥಳೀಯ ಮುಖಂಡರನ್ನು ಕಳಿಸಿ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ನೀಡಿದರು.

ರಾಜು ಪಾಟೀಲ ಅವರ ಕುಟುಂಬಕ್ಕೆ ಈ ನೋವು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ, ಅವರು ಯಾವುದೇ ಕಾರಣದಿಂದ ಧೃತಿಗೆಡಬಾರದು ಎಂದು ಸಚಿವರು ಪ್ರಾರ್ಥಿಸಿದ್ದಾರೆ.******************************

Back to top button