ಪ್ರಕೃತಿ ಬೆಳಗಾವಿ

ಶಿವಂ ಅಸೋಸಿಯೇಟ್ಸ್ ಪ್ರಕರಣದಲ್ಲಿ ಶಿವಾನಂದ ನೀಲಣ್ಣವರ ಬಂಧನ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಹಣ ಸಂಚಲನ ಹಾಗೂ ಪೊಂಜಿ ಮಾದರಿಯ ಯೋಜನೆ ಆರೋಪಕ್ಕೆ ಸಂಬಂಧಿಸಿದಂತೆ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರರನ್ನು ಶುಕ್ರವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.

ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರಾತ್ರಿ ಶಿವಬಸವ ನಗರದ ನಿವಾಸದಲ್ಲಿ ವಶಕ್ಕೆ ಪಡೆದು ನ್ಯಾಯಾಂಗದ ಮುಂದೆ ಹಾಜರುಪಡಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಸುಮಾರು 35 ಸಾವಿರ ಹೂಡಿಕೆದಾರರಿಂದ ₹4,500 ಕೋಟಿ ಸಂಗ್ರಹಿಸಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣವನ್ನು CID ವಹಿಸಿಕೊಳ್ಳುವ ಸಾಧ್ಯತೆ ಇದೆ.*************************************

Back to top button