ಪ್ರಕೃತಿ ಬೆಳಗಾವಿ
*ಬಕ್ರೀದ ಹಬ್ಬದ ಪ್ರಯುಕ್ತ ಜರುಗಿದ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ*

*ಜಿಲ್ಲಾ ಪೊಲೀಸ್ ಕಾರ್ಯಾಲಯ*
ಪ್ರಕೃತಿ ಬೆಳಗಾವಿ ಸುದ್ದಿ : ಧಾರವಾಡ ಮೇ 25 : ಇಂದು (ಮೇ.25) ಬೆಳಿಗ್ಗೆ ಧಾರವಾಡ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರ ಅಧ್ಯಕ್ಷತೆಯಲ್ಲಿ ಬಕ್ರೀದ ಹಬ್ಬದ ಪ್ರಯುಕ್ತ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ ಜರುಗಿತು.
ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಮೇ 28, 2026 ರಂದು ಆಚರಿಸುವ ಬಕ್ರೀದ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಸಾಮರಸ್ಯದಿಂದ ಆಚರಿಸಲು ತಿಳಿಸಿದರು.
ನಂತರ ಸಭೆಯಲ್ಲಿ ಹಾಜರಿದ್ದ ಎಲ್ಲ ತಾಲೂಕಿನ ಮುಖಂಡರು ಮಾತನಾಡಿದರು.******************************






