ಪ್ರಕೃತಿ ಬೆಳಗಾವಿ
*ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ತಂತ್ರಗಾರಿಕೆ ಸಭೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಂಗಳೂರು : ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ತಂತ್ರಗಾರಿಕೆ ರೂಪಿಸಲು ಇಂದು ವಿಧಾನಸೌಧದ ಸಿಎಲ್ಪಿ (CLP) ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಉನ್ನತ ನಾಯಕರ ಸಭೆಯಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿಯಾಗಿದ್ದರು.
ರಾಜ್ಯಸಭೆ ಹಾಗೂ ವಿಧಾನ ಪರಿಷತ್ತಿನ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ
ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ಕುರಿತು ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಸಚಿವರಾದ ಕೆ.ಎಚ್. ಮುನಿಯಪ್ಪ, ಪ್ರಿಯಾಂಕ ಖರ್ಗೆ, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಿದ್ದರು.******************************






