ಪ್ರಕೃತಿ ಬೆಳಗಾವಿ

*ಕೌಟಿಲ್ಯ ಲಿಂಗರಾಜ್ ನಿರಾಯಾಸ ಗೆಲುವು – ಶಾಸಕ ಬಾಲಚಂದ್ರ ಜಾರಕಿಹೊಳಿ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಂಗಳೂರು : ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಚುನಾವಣೆಯಲ್ಲಿ ನಮ್ಮ ಪಕ್ಷದ ಇಬ್ಬರು ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ ಎಂದು ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು.

ವಿಧಾನಸೌಧದ ಒಂದನೇ ಮಹಡಿಯ ಕೊಠಡಿ ಸಂಖ್ಯೆ 106 ರಲ್ಲಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಿಂದ ಸ್ಪರ್ಧೆ ಮಾಡಿರುವ ಕೌಟಿಲ್ಯ ರಘು ಮತ್ತು ಲಿಂಗರಾಜ್ ಪಾಟೀಲ್ ಅವರು ಗೆಲುವು ಸಾಧಿಸಲಿದ್ದಾರೆ ಎಂದರು.

ಈಗಾಗಲೇ ನಮ್ಮ ಪಕ್ಷದಿಂದ 62 ಶಾಸಕರಿದ್ದು ( ಮೂವರು ಉಚ್ಛಾಟಿತ ಶಾಸಕರನ್ನು ಹೊರತುಪಡಿಸಿ) ಒಂದು ಸ್ಥಾನ ಗೆಲ್ಲಲು 28 ಮತ ಬೇಕು. ಅದರಂತೆ ನಮ್ಮ ಪಕ್ಷದ ಇಬ್ಬರೂ ಅಭ್ಯರ್ಥಿಗಳು ನಿರಾಯಾಸವಾಗಿ ಜಯ ಗಳಿಸಲಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ವಿಶ್ವಾಸ ವ್ಯಕ್ತಪಡಿಸಿದರು.*******************************

Leave a Reply

Your email address will not be published. Required fields are marked *

Back to top button