ಪ್ರಕೃತಿ ಬೆಳಗಾವಿ

*ಪಂತ ಬಾಳೇಕುಂದ್ರಿಯ ಶ್ರೀರಾಮ ಕಾಲೋನಿಯಲ್ಲಿ ರಸ್ತೆ-ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ತಾಲೂಕಿನ ಸುಕ್ಷೇತ್ರ ದತ್ತ ಮಹಾರಾಜರ ಪವಾಡ ಪುರುಷರ ನೆಲೆಯಾದ ದತ್ತಾತ್ರೇಯ ಬಾಳೇಕುಂದ್ರಿ ಗ್ರಾಮದ ಶ್ರೀರಾಮ ಕಾಲೋನಿಯಲ್ಲಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭಾನುವಾರ ಚಾಲನೆ ನೀಡಲಾಯಿತು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಾರ್ಗದರ್ಶನದಲ್ಲಿ ಕೈಗೆತ್ತಿಕೊಳ್ಳಲಾದ ಈ ಅಭಿವೃದ್ಧಿ ಕಾಮಗಾರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೂಲಾಬಿ ಅಶೋಕ್ ಕೋಲಕಾರ ಅವರ ನೇತೃತ್ವದಲ್ಲಿ ಗುದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಸಹ ಭಾಗವಹಿಸಿ ಸೌಹಾರ್ದತೆಯ ಸಂದೇಶ ಸಾರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನಿರಂತರವಾಗಿ ಸಾರ್ವಜನಿಕರೊಂದಿಗೆ ಬೆರೆತು ಕ್ಷೇತ್ರದ ಜನತೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಜನಪರ ಆಡಳಿತ ನೀಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಹೊನಗೌಡ ಪಾಟೀಲ, ಸುರೇಶ್ ಕಾಳೋಜಿ, ಪ್ರೇಮ ಕೋಲಾರಕಾರ, ಮಲ್ಲಯ್ಯಾ ಪೂಜಾರಿ, ಪುನಗೌಡ ಪಾಟೀಲ, ಪ್ರಲ್ಹಾದ್ ಪಾಟೀಲ, ರಫೀಕ್ ಮುಲ್ಲಾ, ಮೈನುದ್ದೀನ್ ಸನದಿ, ಉಮೇಶ್ ಕೊಟಗಿ, ಮಹೇಶ್ ಕೊಟಗಿ, ಶ್ರೀಕಾಂತ ಅರಭಾವಿ ಸೇರಿದಂತೆ ಅನೇಕ ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.*******************************

Leave a Reply

Your email address will not be published. Required fields are marked *

Back to top button