ಪ್ರಕೃತಿ ಬೆಳಗಾವಿ

*DG & IGP Commendation Disc – 2025-26 ಪ್ರಶಸ್ತಿ ಪುರಸ್ಕೃತರಿಗೆ ಹೃತ್ಪೂರ್ವಕ ಅಭಿನಂದನೆಗಳು*

ಪ್ರಕೃತಿ ಬೆಳಗಾವಿ ಸುದ್ದಿ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅತ್ಯಂತ ಪ್ರತಿಷ್ಠಿತ DG & IGP Commendation Disc – 2025-26 ಪ್ರಶಸ್ತಿಗೆ ಗದಗ ಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಆಯ್ಕೆಯಾಗಿರುವುದು ಅತ್ಯಂತ ಸಂತಸದ ಹಾಗೂ ಹೆಮ್ಮೆಯ ಸಂಗತಿಯಾಗಿದೆ.

ಕರ್ತವ್ಯನಿಷ್ಠೆ, ಪ್ರಾಮಾಣಿಕತೆ, ಜನಸೇವೆಯ ಬದ್ಧತೆ ಹಾಗೂ ಇಲಾಖೆಯ ಅಭಿವೃದ್ಧಿಗೆ ನೀಡಿದ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಈ ರಾಜ್ಯಮಟ್ಟದ ಗೌರವ ಲಭಿಸಿರುವುದು ಅವರ ವೃತ್ತಿಜೀವನದ ಮಹತ್ವದ ಮೈಲಿಗಲ್ಲಾಗಿದೆ. ಈ ಸಾಧನೆಯು ಗದಗ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಹಾಗೂ ಸೇವಾ ಮನೋಭಾವಕ್ಕೆ ಸಾಕ್ಷಿಯಾಗಿದ್ದು, ಇತರ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರೇರಣೆಯಾಗಿದೆ.

ಪ್ರಶಸ್ತಿಗೆ ಭಾಜನರಾದ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಗದಗ ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲೆಯ ನಾಗರಿಕರು ಹಾಗೂ ಸಾರ್ವಜನಿಕ ವಲಯದಿಂದ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ. ಅವರ ಈ ಸಾಧನೆಯು ಜಿಲ್ಲೆಯ ಕೀರ್ತಿಯನ್ನು ರಾಜ್ಯ ಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದೆ.

ಪ್ರಕೃತಿ ಬೆಳಗಾವಿ ಪತ್ರಿಕೆ ಪ್ರಧಾನ ಸಂಪಾದಕರಾದ ಲಕ್ಷ್ಮಣ ಗು ಗುರವ್ ಅವರು ಪ್ರಶಸ್ತಿ ಪುರಸ್ಕೃತ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಕರ್ತವ್ಯನಿಷ್ಠೆ ಮತ್ತು ಜನಪರ ಸೇವೆಯ ಮೂಲಕ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಿ ರಾಜ್ಯಕ್ಕೆ ಮಾದರಿಯಾಗಲಿ ಎಂದು ಶುಭ ಹಾರೈಸಿದ್ದಾರೆ.

ಪ್ರಶಸ್ತಿ ಪುರಸ್ಕೃತರ ಈ ಸಾಧನೆಗೆ ಮತ್ತೊಮ್ಮೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಉಜ್ವಲ ಭವಿಷ್ಯಕ್ಕಾಗಿ ಶುಭಾಶಯಗಳು.*******************************

Leave a Reply

Your email address will not be published. Required fields are marked *

Back to top button