ಪ್ರಕೃತಿ ಬೆಳಗಾವಿ

*ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಚನ್ನರಾಜ ಹಟ್ಟಿಹೊಳಿ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಧಾರವಾಡದಿಂದ ಬೆಳಗಾವಿಗೆ ಸಂಪರ್ಕ ಕಲ್ಪಿಸುವ ನೂತನ ರೈಲ್ವೆ ಮಾರ್ಗ ಯೋಜನೆಗೆ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ನ್ಯಾಯಯುತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ರೈತ ಮುಖಂಡರು ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ರೈತರಿಗೆ ಬೆಂಬಲ ಸೂಚಿಸಿದರು.

​ಅಭಿವೃದ್ಧಿ ಯೋಜನೆಗಳ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಾಗ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಯೋಗ್ಯ ಹಾಗೂ ನ್ಯಾಯಯುತವಾದ ಪರಿಹಾರವನ್ನು ನಿಗದಿಪಡಿಸಬೇಕು ಎಂದು ಈ ಸಂದರ್ಭದಲ್ಲಿ ಅವರು ಒತ್ತಾಯಿಸಿದರು.

​ಈ ಹೋರಾಟದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಚುನ್ನಪ್ಪ ಪೂಜೇರಿ ಹಾಗೂ ಪ್ರಮುಖ ರೈತ ಮುಖಂಡರು ಉಪಸ್ಥಿತರಿದ್ದರು.******************************

Leave a Reply

Your email address will not be published. Required fields are marked *

Back to top button