ಪ್ರಕೃತಿ ಬೆಳಗಾವಿ

ಗೋಕಾಕದಲ್ಲಿ ಗೊಂಧಳಿ ಸಮಾಜದ ಎಂಟು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ?

*ಬಹಿಷ್ಕಾರಕ್ಕೊಳಗಾದ ಕುಟುಂಬಗಳ ಅಳಲು – ನ್ಯಾಯಕ್ಕಾಗಿ ಮನವಿ*

ಪ್ರಕೃತಿ ಬೆಳಗಾವಿ ಸುದ್ದಿ : ಗೋಕಾಕ್ : ಗೋಕಾಕ ನಗರದಲ್ಲಿ ಗೊಂಧಳಿ ಸಮಾಜದ ಎಂಟು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹೇರಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಹಿಷ್ಕಾರದಿಂದ ತಾವು ತೀವ್ರ ಮಾನಸಿಕ ಹಾಗೂ ಸಾಮಾಜಿಕ ಸಂಕಷ್ಟವನ್ನು ಅನುಭವಿಸುತ್ತಿದ್ದೇವೆ ಎಂದು ಸಂಬಂಧಿತ ಕುಟುಂಬಗಳು ಅಳಲು ತೋಡಿಕೊಂಡಿವೆ.

ಬಹಿಷ್ಕಾರಕ್ಕೊಳಗಾದ ಕುಟುಂಬಗಳ ಸದಸ್ಯರ ಮಾತಿನ ಪ್ರಕಾರ, ಸಮಾಜದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶ ನೀಡುತ್ತಿಲ್ಲ. ಜೊತೆಗೆ ಸಾಮಾಜಿಕ ಸಂಪರ್ಕಗಳನ್ನೂ ಕಡಿತಗೊಳಿಸಲಾಗಿದ್ದು, ಇದರಿಂದ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ ಎಂದು ಆರೋಪಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯ ದೊರಕಿಸಿಕೊಡುವಂತೆ ಹಾಗೂ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಸಂಬಂಧಿತ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಸಮಾಜದ ಮುಖಂಡರ ಪ್ರತಿಕ್ರಿಯೆ ಇನ್ನಷ್ಟೇ ಲಭ್ಯವಾಗಬೇಕಿದ್ದು, ಪ್ರಕರಣದ ಸತ್ಯಾಸತ್ಯತೆ ಕುರಿತು ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.*******************************

Leave a Reply

Your email address will not be published. Required fields are marked *

Back to top button