ಪ್ರಕೃತಿ ಬೆಳಗಾವಿ

*ಮೂಡಲಗಿ ಹೊಲದಲ್ಲಿ ಕೆಲಸ ಮಾಡುವ ವೇಳೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸಾವು*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಈ ಘಟನೆ ಇಡೀ ಗ್ರಾಮವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.

ಮುತ್ತಪ್ಪ ಮುಗಳಖೋಡ ಹಾಗೂ ಪತ್ನಿಯಾದ ರಾಜಶ್ರೀ ಮುಗಳಖೋಡ ಸಾವಿಗೀಡಾದ ದಂಪತಿಗಳು.

ಮೃತ ದಂಪತಿ ಎಂದಿನಂತೆ ತಮ್ಮ ಹೊಲದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದರು. ಇದೇ ವೇಳೆ ಹೊಲದ ಸಮೀಪದಲ್ಲಿದ್ದ ವಿದ್ಯುತ್ ತಂತಿ ಸಂಪರ್ಕಕ್ಕೆ ಬಂದಿದ್ದು, ಇಬ್ಬರಿಗೂ ತೀವ್ರ ವಿದ್ಯುತ್ ಆಘಾತ ಉಂಟಾಗಿದೆ.

ಸ್ಥಳದಲ್ಲಿದ್ದವರು ಕೂಡಲೇ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅಷ್ಟರಲ್ಲಾಗಲೇ ಇಬ್ಬರೂ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಈ ದುರ್ಘಟನೆಯಿಂದ ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳೀಯರು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಹಾಗೂ ಇಂತಹ ಘಟನೆಗಳು ಮರಕಲಿದ್ದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು.********************************

Leave a Reply

Your email address will not be published. Required fields are marked *

Back to top button