ಪ್ರಕೃತಿ ಬೆಳಗಾವಿ

*ರಾಣಿ ಚನ್ನಮ್ಮ ವಿವಿ: ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ (RCUB) 2026-27ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ (PG) ಪದವಿ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವರಾದ ಸಂತೋಷ್ ಕಾಮಗೌಡ (ಕೆ.ಎ.ಎಸ್) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶ್ವವಿದ್ಯಾಲಯದ ಬೆಳಗಾವಿ ಮುಖ್ಯ ಆವರಣದ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ವಿಜಯಪುರದ ಸ್ನಾತಕೋತ್ತರ ಕೇಂದ್ರ ಹಾಗೂ ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳ ಸಂಯೋಜಿತ ಮಹಾವಿದ್ಯಾಲಯಗಳಲ್ಲಿ ಲಭ್ಯವಿರುವ ಕೋರ್ಸ್‌ಗಳಿಗೆ ಈ ಹಿಂದೆ ಜುಲೈ 1ರಿಂದ ಜುಲೈ 20ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಈಗ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಅವಧಿಯನ್ನು ಜುಲೈ 21, 2026 ರಿಂದ ಜುಲೈ 26, 2026ರ ವರೆಗೆ ವಿಸ್ತರಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ರಾಜ್ಯ ಸರ್ಕಾರದ UUCMS ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಆಗಸ್ಟ್ 1 ರಿಂದ ಪ್ರವೇಶ ಪ್ರಕ್ರಿಯೆ ಆರಂಭ:
2026-27ನೇ ಸಾಲಿನ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆಯು ಆಗಸ್ಟ್ 1, 2026 ರಿಂದ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೆಳಗಾವಿ ಮುಖ್ಯ ಆವರಣದಲ್ಲಿ ಜರುಗಲಿದೆ. ಪ್ರವೇಶಾತಿಯ ಸಂಪೂರ್ಣ ವೇಳಾಪಟ್ಟಿ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣವಾದ www.rcub.ac.in ಗೆ ಭೇಟಿ ನೀಡಲು ಕೋರಲಾಗಿದೆ.*******************************

Leave a Reply

Your email address will not be published. Required fields are marked *

Back to top button