ಪ್ರಕೃತಿ ಬೆಳಗಾವಿ
*ಗೋಕಾಕ್ ನಗರದ ನಾಕಾ ನಂ.1 ಬಳಿ ತಡರಾತ್ರಿ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಲಾರಿ ಪಲ್ಟಿ*

ಪ್ರಕೃತಿ ಬೆಳಗಾವಿ ಸುದ್ದಿ : ಗೋಕಾಕ್ ನಗರದ ನಾಕಾ ನಂ.1 ಬಳಿ ತಡರಾತ್ರಿ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾಗಿರುವ ಘಟನೆ ನಡೆದಿದೆ.
ಅಪಘಾತದ ಬಳಿಕ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಆಗಮಿಸಿ, ಕ್ರೇನ್ ಸಹಾಯದಿಂದ ಲಾರಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.
ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆಯ ನಿಖರ ಕಾರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.********************************






