ಪ್ರಕೃತಿ ಬೆಳಗಾವಿ

*ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ*

ಪ್ರಕೃತಿ ಬೆಳಗಾವಿ ಸುದ್ದಿ : ಎಂ.ಕೆ.ಹುಬ್ಬಳ್ಳಿ : ಎಂ.ಕೆ.ಹುಬ್ಬಳ್ಳಿಯ ಪ್ರತಿಷ್ಠಿತ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಖಾನೆಯ ಅಧ್ಯಕ್ಷ ಚನ್ನರಾಜ ಹಟ್ಟಿಹೊಳಿ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ಹೋರಾಟವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಸ್ವಾತಂತ್ರ್ಯ ಹೋರಾಟಗಾರರು ಕಂಡಿದ್ದ ಸಮೃದ್ಧ, ಶಾಂತಿಯುತ ಹಾಗೂ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸು ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಗ್ರಾಮದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ ಸೇರಿದಂತೆ ವಿವಿಧ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಕಾರ್ಖಾನೆಯ ಉಪಾಧ್ಯಕ್ಷರು, ನಿರ್ದೇಶಕರು, ವಿವಿಧ ವಿಭಾಗಗಳ ಮುಖ್ಯಸ್ಥರು, ಕಾರ್ಮಿಕರು ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.********************************

Leave a Reply

Your email address will not be published. Required fields are marked *

Back to top button