*ವಿವಿಧ ಗ್ರಾಪಂಗಳಿಗೆ ಭೇಟಿ ನೀಡಿದ ಜಿಪಂ ಸಿಇಒ ರಾಹುಲ್ ಶಿಂಧೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ ಜಿಲ್ಲಾ ಪಂಚಾಯತಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ ಅವರು ಗುರುವಾರ ಬೆಳಗಾವಿ ತಾಲೂಕಿನ ನೀಲಜಿ ಹಾಗೂ ಹೊನಗಾ ಗ್ರಾಮ ಪಂಚಾಯತ ಕಾರ್ಯಾಲಯಗಳಿಗೆ ಭೇಟಿ ನೀಡಿದರು.
ನೀಲಜಿ ಗ್ರಾಪಂ ವ್ಯಾಪ್ತಿಯ ಶಿಂಧೋಳಿ ಗ್ರಾಮದಲ್ಲಿ ವಿಬಿ-ಜಿ ರಾಮ್ ಜಿ’ ಯೋಜನೆಯಡಿ ಪ್ರಗತಿಯಲ್ಲಿದ್ದ ತಿರುಗಾಲುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು. ಕಾಮಗಾರಿ ಸ್ಥಳದಲ್ಲಿ ಹಾಜರಿದ್ದ ಕಾಯಕ ಬಂಧುಗಳು ಹಾಗೂ ಕೂಲಿಕಾರರಿಂದ ಕಾಮಗಾರಿ ಸ್ಥಳದಲ್ಲಿ ಒದಗಿಸಲಾಗುತ್ತಿರುವ ಅಗತ್ಯ ಸೌಕರ್ಯಗಳ ಕುರಿತು ಮಾಹಿತಿ ಪಡೆದರು. ಎನ್.ಎಮ್.ಎಮ್.ಎಸ್. ಹಾಜರಾತಿ ಸೆರೆಹಿಡಿಯುವ ಪ್ರಕ್ರಿಯೆಯನ್ನು ಕಾಯಕ ಬಂಧುಗಳ ಮೊಬೈಲ್ ಮೂಲಕ ವೀಕ್ಷಣೆ ಮಾಡಿದರು.
ಹೊನಗಾ ಗ್ರಾಪಂಗೆ ಭೇಟಿ; ಕೂಲಿಕಾರರೊಂದಿಗೆ ಚರ್ಚೆ:
ನಂತರ ಹೊನಗಾ ಗ್ರಾಮ ಪಂಚಾಯತ ಕಾರ್ಯಾಲಯಕ್ಕೆ ಭೇಟಿ ನೀಡಿ, ಗ್ರಾಮಸ್ಥರು ಹಾಗೂ ಸ್ಥಳೀಯ ಕೂಲಿಕಾರರಿಂದ ಯೋಜನೆಯಡಿ ಕೆಲಸ ನೀಡುತ್ತಿರುವ ಬಗ್ಗೆ ಮಾಹಿತಿ ಪಡೆದರು. ಬೇಡಿಕೆ ಸಲ್ಲಿಸಿದ ಎಲ್ಲ ಕೂಲಿಕಾರರಿಗೆ ಕಡ್ಡಾಯವಾಗಿ ಕೆಲಸ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಹಾಗೂ ಯೋಜನೆಯ ಸದುಪಯೋಗ ಪಡೆಯುವಂತೆ ಗ್ರಾಮಸ್ಥರಿಗೆ ತಿಳಿಸಿದರು.
ವಿಬಿ-ಜಿ ರಾಮ್ ಜಿ’ ಯೋಜನೆಯಡಿ ಎಲ್ಲ ಕೂಲಿಕಾರರಿಗೆ ಕಡ್ಡಾಯವಾಗಿ ಕೆಲಸ ಕೊಡುವಂತೆ ಹಾಗೂ ಇ-ಸ್ವತ್ತು ಅರ್ಜಿಗಳನ್ನು ತ್ವರಿತವಾಗಿ ವಿತರಣೆ ಮಾಡುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಯೋಜನಾ ನಿರ್ದೇಶಕರಾದ ಶ್ರೀ ರವಿ ಬಂಗಾರೆಪ್ಪನವರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾಉ) ಸೇರಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಎಡಿಪಿಸಿ, ಡಿಎಮ್ಐಎಸ್, ಡಿಐಇಸಿ, ತಾಪಂ, ಗ್ರಾಪಂ ಸಿಬ್ಬಂದಿ ಹಾಗೂ ಇನ್ನಿತರರು ಹಾಜರಿದ್ದರು.**********************************






