*ಬೆಳಗಾವಿಯಲ್ಲಿ 43ನೇ ಕರ್ನಾಟಕ ರಾಜ್ಯ ಮಿನಿ ಮತ್ತು ಸಬ್ಜೂನಿಯರ್ ಜೂಡೋ ಚಾಂಪಿಯನ್ಷಿಪ್ಗೆ ತೆರೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಕರ್ನಾಟಕ ಜುಡೋ ಸಂಸ್ಥೆ, ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲಾ ಜುಡೋ ಸಂಸ್ಥೆಯ ಸಹಯೋಗದಲ್ಲಿ ಬೆಳಗಾವಿಯಲ್ಲಿ ಆಯೋಜಿಸಿದ್ದ 43ನೇ ಕರ್ನಾಟಕ ರಾಜ್ಯ ಮಿನಿ ಮತ್ತು ಸಬ್ಜೂನಿಯರ್ ಜೂಡೋ ಚಾಂಪಿಯನ್ಷಿಪ್–2026-27ರ ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿ, ವಿವಿಧ ವಿಭಾಗಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಪ್ರಶಸ್ತಿ ವಿತರಿಸಿ ಅಭಿನಂದಿಸಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪ್ರತಿಭಾವಂತ ಕ್ರೀಡಾಪಟುಗಳ ಉತ್ಸಾಹ ಹಾಗೂ ಕ್ರೀಡಾ ಪ್ರತಿಭೆ ಮೆಚ್ಚುವಂತಿತ್ತು. ಜೂಡೋ ಕ್ರೀಡೆಯ ಮೂಲಕ ಶಿಸ್ತು, ಆತ್ಮವಿಶ್ವಾಸ ಹಾಗೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುತ್ತಿರುವ ಯುವ ಕ್ರೀಡಾಪಟುಗಳಿಗೆ ರಾಹುಲ್ ಜಾರಕಿಹೊಳಿ ಅವರು ಶುಭ ಹಾರೈಸಿದರು.
ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಎಲ್ಲಾ ವಿಜೇತರು ಹಾಗೂ ಭಾಗವಹಿಸಿದ ಕ್ರೀಡಾಪಟುಗಳನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಪ್ರೋತ್ಸಾಹಿಸಿದರು.******************************






