ಪ್ರಕೃತಿ ಬೆಳಗಾವಿ

*ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಲಿ ಎಂದು ಶ್ರೀಶೈಲ ಮಲ್ಲಿಕಾರ್ಜುನ ದೇವಾಲಯ ದಲ್ಲಿ ಇಷ್ಟ ಲಿಂಗ ಪೂಜೆ*

ಪ್ರಕೃತಿ ಬೆಳಗಾವಿ ಸುದ್ದಿ : ಶ್ರೀಶೈಲಂ : ಕರ್ನಾಟಕದ ಸಚಿವ ಸತೀಶ್ ಜಾರಕಿಹೊಳಿ ಅವರು ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಹಾರೈಸಿ, ಅವರ ಅಭಿಮಾನಿಯೊಬ್ಬರು ಆಂಧ್ರಪ್ರದೇಶದ ಶ್ರೀಶೈಲದಲ್ಲಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸತೀಶ್ ಜಾರಕಿಹೊಳಿ ಅವರಿಗೆ ದೇವರ ಆಶೀರ್ವಾದ ದೊರೆಯಲಿ ಹಾಗೂ ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶ ಸಿಗಲಿ ಎಂದು ಪ್ರಾರ್ಥಿಸಿದರು.

“ಸತೀಶ್ ಜಾರಕಿಹೊಳಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಜನಸೇವೆ ಮಾಡಬೇಕು ಎಂಬುದು ನಮ್ಮ ಅಭಿಮಾನಿಗಳ ಆಶಯ” ಎಂದು ಅಭಿಮಾನಿ ತಿಳಿಸಿದರು. ಈ ವೇಳೆ ದೇವಾಲಯದಲ್ಲಿ ಭಕ್ತಿಭಾವದಿಂದ ಪೂಜೆ ಸಲ್ಲಿಸಿ, ಸತೀಶ್ ಜಾರಕಿಹೊಳಿ ಅವರ ರಾಜಕೀಯ ಭವಿಷ್ಯ ಉತ್ತಮವಾಗಿರಲಿ ಎಂದು ಹಾರೈಸಲಾಯಿತು.******************************

Leave a Reply

Your email address will not be published. Required fields are marked *

Back to top button