ಪ್ರಕೃತಿ ಬೆಳಗಾವಿ
*ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಬುಡಾ) ನೂತನ ಅಧ್ಯಕ್ಷರಾಗಿ ಶಾಸಕ ಆಸಿಫ್ ಸೇಠ್ ನೇಮಕ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ – BUDA) ನೂತನ ಅಧ್ಯಕ್ಷರಾಗಿ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಆಸಿಫ್ (ರಾಜು) ಸೇಠ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ, 1987ರ ಅನ್ವಯ ಈ ಹಿಂದಿನ ಅಧ್ಯಕ್ಷರಾಗಿದ್ದ ಲಕ್ಷ್ಮಣರಾವ್ ಚಿಂಗಳೆ ಅವರ ಸ್ಥಾನಕ್ಕೆ ಆಸಿಫ್ ಸೇಠ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಲಾಗಿದೆ.
ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಈ ಕುರಿತು ಅಧಿಸೂಚನೆ ಪ್ರಕಟಿಸಿದ್ದಾರೆ.*******************************





