ಪ್ರಕೃತಿ ಬೆಳಗಾವಿ
*ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿದ ಸಚಿವ ಸತೀಶ್ ಜಾರಕಿಹೊಳಿ*
*ಸೆ.3 ರಂದು ಜಿಲ್ಲಾ ಪಂಚಾಯತ ವತಿಯಿಂದ ‘ಸ್ವಯಂ ಪ್ರೇರಿತ ರಕ್ತದಾನ ಶಿಬಿರ*
ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಜಿಲ್ಲಾ ಪಂಚಾಯತ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಸೆ.3 ರಂದು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿರುವ ‘ಸ್ವಯಂ ಪ್ರೇರಿತ ರಕ್ತದಾನ ಶಿಬಿರ’ದ ಪೋಸ್ಟರ್ ಹಾಗೂ ಪ್ರಚಾರ ಸಾಮಗ್ರಿಗಳನ್ನು ಮಾನ್ಯ ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ಅವರು ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಇಂದು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಮೊಹಮ್ಮದ ರೋಷನ್, ಮಾನ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ, ಮಾನ್ಯ ನಗರ ಪೊಲೀಸ್ ಆಯುಕ್ತರಾದ ಶ್ರೀ ಭೂಷಣ ಬೋರಸೆ, ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಕೆ.ರಾಮರಾಜನ್ ಸೇರಿ ಇನ್ನಿತರ ಅಧಿಕಾರಿಗಳು ಹಾಜರಿದ್ದರು.********************************






