ಪ್ರಕೃತಿ ಬೆಳಗಾವಿ

*ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚ ಸುದೀಪ್ ಜೊತೆ ಪ್ರೆಸ್‌ಮೀಟ್*

ಪ್ರಕೃತಿ ಬೆಳಗಾವಿ ಸುದ್ದಿ : ಬೆಂಗಳೂರು : ಬಹು ನಿರೀಕ್ಷಿತ ಬಿಗ್‌ಬಾಸ್ ಕನ್ನಡ ಸೀಸನ್ 13 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್ 6ರಂದು ಸೀಸನ್ 13ರ ಗ್ರ್ಯಾಂಡ್ ಪ್ರೀಮಿಯರ್ ನಡೆಯಲಿದ್ದು, ಕಿಚ್ಚ ಸುದೀಪ್ ಮತ್ತೊಮ್ಮೆ ನಿರೂಪಕರಾಗಿ ವೀಕ್ಷಕರನ್ನು ರಂಜಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ಅವರೊಂದಿಗೆ ಪ್ರೆಸ್‌ಮೀಟ್ ಆಯೋಜಿಸಲಾಗಿದ್ದು, ಸೀಸನ್ 13ರ ವಿಶೇಷತೆಗಳು, ಹೊಸತನ ಹಾಗೂ ಕಾರ್ಯಕ್ರಮದ ಕುರಿತು ಮಾಧ್ಯಮಗಳೊಂದಿಗೆ ಅವರು ಮಾತನಾಡಲಿದ್ದಾರೆ.

ಈ ಬಾರಿ ‘ಬಿಗ್‌ಬಾಸ್ ಅಗ್ನಿಪರೀಕ್ಷೆ’ ಮೂಲಕ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆಯಲ್ಲೂ ವಿಭಿನ್ನ ಪ್ರಯತ್ನ ಮಾಡಲಾಗಿದ್ದು, ಸೀಸನ್ 13ರ ಬಗ್ಗೆ ಅಭಿಮಾನಿಗಳಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.

ಕಿಚ್ಚ ಸುದೀಪ್ ಜೊತೆಗಿನ ಪ್ರೆಸ್‌ಮೀಟ್‌ನ ಕ್ಷಣಗಳು ಇದೀಗ ಅಭಿಮಾನಿಗಳ ಗಮನ ಸೆಳೆಯುತ್ತಿದ್ದು, ಬಿಗ್‌ಬಾಸ್ ಮನೆಯೊಳಗೆ ಯಾರೆಲ್ಲಾ ಪ್ರವೇಶಿಸಲಿದ್ದಾರೆ ಎಂಬ ಕುತೂಹಲವೂ ಹೆಚ್ಚಾಗಿದೆ.**********************************

Leave a Reply

Your email address will not be published. Required fields are marked *

Back to top button