ಪ್ರಕೃತಿ ಬೆಳಗಾವಿ

*ಭರವಸೆ ನೀಡಿದಂತೆ ಎರಡನೇ ಹಂತದ ಅನುದಾನದ ಚೆಕ್ ಹಸ್ತಾಂತರಿಸಿದ ಲಕ್ಷ್ಮೀ ಹೆಬ್ಬಾಳಕರ್*

*ವಿಠ್ಠಲ ರುಕ್ಮಾಯಿ ದೇವಸ್ಥಾನ ನಿರ್ಮಾಣಕ್ಕೆ ಮತ್ತೆ ₹10 ಲಕ್ಷ ನೆರವು*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಕಂಗ್ರಾಳಿ ಬಿಕೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ವಿಠ್ಠಲ ರುಕ್ಮಾಯಿ ದೇವಸ್ಥಾನದ ಕಟ್ಟಡ ಕಾಮಗಾರಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಆರ್ಥಿಕ ನೆರವಿನ ಭಾಗವಾಗಿ ಎರಡನೇ ಹಂತದ ಸುಮಾರು ₹10 ಲಕ್ಷ ರೂ.ಗಳ ಚೆಕ್‌ ಅನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಗುರುವಾರ ದೇವಸ್ಥಾನ ಸಮಿತಿಯವರಿಗೆ ಹಸ್ತಾಂತರಿಸಿದರು.

ದೇವಸ್ಥಾನದ ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಒಟ್ಟು ಸುಮಾರು ₹35 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಲಾಗಿತ್ತು. ಅದರಂತೆ ಈಗಾಗಲೇ ಮೊದಲ ಹಂತದ ನೆರವು ನೀಡಲಾಗಿದ್ದು, ಇದೀಗ ಎರಡನೇ ಹಂತದ ಅನುದಾನದ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ.

ಗ್ರಾಮದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯೊಂದಿಗೆ ನಿಕಟವಾಗಿ ಬೆಸೆದುಕೊಂಡಿರುವ ಶ್ರೀ ವಿಠ್ಠಲ ರುಕ್ಮಾಯಿ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಲಕ್ಷ್ಮೀ ಹೆಬ್ಬಾಳಕರ್ ಅವರು ಭರವಸೆ ನೀಡಿದರು.
ದೇವಸ್ಥಾನ ನಿರ್ಮಾಣ ಕಾರ್ಯವು ಶೀಘ್ರವಾಗಿ ಪೂರ್ಣಗೊಂಡು ಭಕ್ತರಿಗೆ ಅನುಕೂಲವಾಗಲಿ ಹಾಗೂ ಗ್ರಾಮದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ದೊರೆಯಲಿ ಎಂದು ಅವರು ಆಶಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ದೇವಸ್ಥಾನ ಸಮಿತಿ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.********************************

Leave a Reply

Your email address will not be published. Required fields are marked *

Back to top button