ಪ್ರಕೃತಿ ಬೆಳಗಾವಿ
*ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ‘ಸಾಮೂಹಿಕ ಶ್ರಮದಾನ’ ಕಾರ್ಯಕ್ರಮ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ ಹಾಗೂ ಕಂಗ್ರಾಳಿ ಕೆ.ಎಚ್. ಗ್ರಾಮ ಪಂಚಾಯತ ಸಹಯೋಗದಲ್ಲಿ ಕಂಗ್ರಾಳಿ ಕೆ.ಎಚ್. ಗ್ರಾಮದಲ್ಲಿ ಗುರುವಾರ “ಸ್ವಚ್ಛತಾ ಹೀ ಸೇವಾ” ಅಭಿಯಾನದ ಅಂಗವಾಗಿ ಹಮ್ಮಿಕೊಂಡಿದ್ದ ಸಾಮೂಹಿಕ ಶ್ರಮದಾನ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ಶ್ರೀ ರವಿ ಬಂಗಾರೆಪ್ಪನವರ್ ಚಾಲನೆ ನೀಡಿದರು.
ನಂತರ ಜಿಪಂ, ತಾಪಂ, ಗ್ರಾಪಂ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಗ್ರಾಮದಲ್ಲಿ ಸಾಮೂಹಿಕವಾಗಿ ಸ್ವಚ್ಚತಾ ಕಾರ್ಯ ಕೈಗೊಂಡರು. ಸ್ವಚ್ಚತೆಯ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾಉ), ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಜಿಪಂ ಸ್ವಚ್ಚಭಾರತ ಯೋಜನೆಯ ಸಿಬ್ಬಂದಿ, ತಾಪಂ, ಗ್ರಾಪಂ ಸಿಬ್ಬಂದಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.******************************






