*ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಮತ್ತು ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ವನ್ನು ಜಂಟಿಯಾಗಿ ಪ್ರೆಶಿಯಸ್ ಬ್ಲಾಸಮ್ ಹೈಸ್ಕೂಲ್, ಹಿಂದವಾಡಿ, ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಯೋಜಿಸಲಾಯಿತು.
ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಶ್ರೀ ಎನ್. ಎಫ್. ಕಿತ್ತೂರ್, ಸಾಹಿತಿ ಹಾಗೂ ಶಿಕ್ಷಕರು ಮತ್ತು ಶ್ರೀ ಮಲ್ಲಿಕಾರ್ಜುನ ಗೌಡರ, ಕನ್ನಡ ಅಧ್ಯಾಪಕರು ಅವರು ಕೂಡಿ ಸಂಘಟಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಲಯದ ಪ್ರಾಚಾರ್ಯರಾದ ಶ್ರೀಮತಿ ಜ್ಯೋತ್ಸ್ನಾ ಮೇಡಂ ಜಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಶೀತಲ್ ಜಾದವ್, ಮುಕ್ತಾಂಗಣ ವಿದ್ಯಾಲಯ , ಶ್ರೀ ರಾಘವೇಂದ್ರ ಬಂಡಾರಿ ಸರ್, ಸ್ವಾಧ್ಯಾ ವಿದ್ಯಾಲಯ ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.
ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪ್ರಶಸ್ತಿ ಫಲಕ ಹಾಗೂ ಪ್ರಮಾಣಪತ್ರಗಳನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪಾಲಕರು ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಮಕ್ಕಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಬರವಣಿಗೆಯ ಆಸಕ್ತಿ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವಂತಹ ಅರ್ಥಪೂರ್ಣ ಮತ್ತು ಸ್ಮರಣೀಯ ಕಾರ್ಯಕ್ರಮವಾಗಿ ಯಶಸ್ವಿಯಾಗಿ ನೆರವೇರಿತು.**********************************






