*ಹುಟ್ಟುಹಬ್ಬಕ್ಕೆ ಅರ್ಥಪೂರ್ಣ ಕೊಡುಗೆ: ಎರಡು ಚಿರತೆ, ಒಂದು ಸಿಂಹ ದತ್ತು ಪಡೆದ ಯುವ ನಾಯಕ ರಾಹುಲ್ ಜಾರಕಿಹೊಳಿ*

*ವನ್ಯಜೀವಿಗಳ ಸಂರಕ್ಷಣೆ ಹಾಗೂ ಪರಿಸರ ಕಾಳಜಿಗೆ ಆದ್ಯತೆ – 27ನೇ ಜನ್ಮದಿನವನ್ನು ಸಮಾಜಮುಖಿ ಕಾರ್ಯದ ಮೂಲಕ ಅರ್ಥಪೂರ್ಣವಾಗಿ ಆಚರಣೆ*
ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ತಮ್ಮ 27ನೇ ಜನ್ಮದಿನವನ್ನು ಸಮಾಜಮುಖಿ ಹಾಗೂ ಪರಿಸರಪರ ಕಾಳಜಿಯೊಂದಿಗೆ ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ, ಕರ್ನಾಟಕ ಅಪೆಕ್ಸ್ ಬ್ಯಾಂಕ್ ಮತ್ತು ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಸತೀಶ್ ಜಾರಕಿಹೊಳಿ ಅವರು ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಎರಡು ಚಿರತೆಗಳು ಹಾಗೂ ಒಂದು ಸಿಂಹವನ್ನು ದತ್ತು ಪಡೆದು, ಅವುಗಳ ಆರೈಕೆ ಮತ್ತು ಪೋಷಣೆಗೆ ಮುಂದಾಗಿದ್ದಾರೆ.
ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಉತ್ತರ ಕರ್ನಾಟಕದ ಏಕೈಕ ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ವನ್ಯಜೀವಿಗಳನ್ನು ದತ್ತು ಪಡೆಯುವ ಮೂಲಕ ರಾಹುಲ್ ಜಾರಕಿಹೊಳಿ ಅವರು ತಮ್ಮ ಜನ್ಮದಿನವನ್ನು ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಸಾರ್ಥಕ ಕಾರ್ಯಕ್ಕೆ ಮೀಸಲಿಟ್ಟಿದ್ದಾರೆ.********************************






