ಪ್ರಕೃತಿ ಬೆಳಗಾವಿ
*ಅನ್ನಭಾಗ್ಯಕ್ಕೆ ಕನ್ನ ಹಾಕಿದ ಆರೋಪಿ ಬಂಧನ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಸರ್ಕಾರದ ವಿವಿಧ ಯೋಜನೆಗಳಡಿ ಸಾರ್ವಜನಿಕರಿಗೆ ವಿತರಿಸಲು ನೀಡಲಾಗಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿ ಮೇಲೆ ಮಾಳಮಾರುತಿ ಪೊಲೀಸರು ದಾಳಿ ನಡೆಸಿ, ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಅಕ್ಟೋಬರ್ 5ರಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕ ಇಲಿಯಾಸ ಇಮಾಮಸಾಬ್ ಮುನಿಯಾರ್ ನೀಡಿದ ದೂರಿನ ಮೇರೆಗೆ ಪೊಲೀಸರು ಆಜಾದ್ ನಗರದಲ್ಲಿರುವ ಇಂಡಿಯಾ ಗ್ಯಾರೇಜ್ ಬಳಿ ದಾಳಿ ನಡೆಸಿದರು.
ಈ ವೇಳೆ 11,700 ಕೆ.ಜಿ. ಪಡಿತರ ಅಕ್ಕಿ ತುಂಬಿದ್ದ ಲಾರಿ ಪತ್ತೆಯಾಗಿದ್ದು, ಚಾಲಕ ವಿಜಯ ನಾರಾಯಣ ಭೋಸಲೆ (ವಡಗಾವಿ, ಪನಗರಿ, ಸಾತಾರ ಜಿಲ್ಲೆ) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.
ಪೊಲೀಸರು 2.63 ಲಕ್ಷ ರು.ಮೌಲ್ಯದ ಪಡಿತರ ಅಕ್ಕಿ ಹಾಗೂ 6 ಲಕ್ಷ ರು.ಮೌಲ್ಯದ ಟಾಟಾ ಲಾರಿ ಸೇರಿದಂತೆ ಒಟ್ಟು 8.63 ಲಕ್ಷ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.************************************





