ಪ್ರಕೃತಿ ಬೆಳಗಾವಿ

*ವಾಲ್ಮೀಕಿ ಜಯಂತಿ: ವಿವಿಧ ವಾಲ್ಮೀಕಿ ಯುವಕ ಸಂಘಗಳಿಗೆ ಲಕ್ಷ್ಮೀತಾಯಿ ಫೌಂಡೇಶನ್‌ನಿಂದ ಆರ್ಥಿಕ ನೆರವು*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಮಹರ್ಷಿ ವಾಲ್ಮೀಕಿ ಜಯಂತಿಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ವಾಲ್ಮೀಕಿ ಯುವಕ ಸಂಘಗಳು ಹಾಗೂ ವಾಲ್ಮೀಕಿ ಸಂಘಟನೆಗಳಿಗೆ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ನೀಡಿದರು.

ಪ್ರತಿ ವರ್ಷದಂತೆ ಈ ಬಾರಿಯೂ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲು ಅನುಕೂಲವಾಗುವಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ ವಾಲ್ಮೀಕಿ ಯುವಕ ಸಂಘಗಳು ಹಾಗೂ ಸಂಘಟನೆಗಳಿಗೆ ಆರ್ಥಿಕ ಸಹಾಯ ಹಸ್ತಾಂತರಿಸಲಾಯಿತು.

ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ವಾಲ್ಮೀಕಿ ಜಯಂತಿ ಮಾತ್ರವಲ್ಲದೆ, ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ, ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಸೇರಿದಂತೆ ವಿವಿಧ ಮಹಾನ್ ವ್ಯಕ್ತಿಗಳ ಜಯಂತಿ ಹಾಗೂ ಉತ್ಸವಗಳ ಸಂದರ್ಭದಲ್ಲಿಯೂ ಸಂಘ-ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುವ ಪರಿಪಾಠವನ್ನು ಮುಂದುವರಿಸಿಕೊಂಡು ಬರಲಾಗಿದೆ.

ಸಾಮಾಜಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಸಂಘಟನೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಫೌಂಡೇಶನ್ ವತಿಯಿಂದ ಪ್ರತಿವರ್ಷ ಇಂತಹ ಸಹಾಯವನ್ನು ಒದಗಿಸಲಾಗುತ್ತಿದೆ.

ಈ ಬಾರಿಯೂ ವಾಲ್ಮೀಕಿ ಜಯಂತಿಯ ಅಂಗವಾಗಿ ಜಿಲ್ಲೆಯ 50ಕ್ಕೂ ಹೆಚ್ಚು ವಾಲ್ಮೀಕಿ ಸಂಘಟನೆಗಳಿಗೆ ನೆರವು ನೀಡುವ ಮೂಲಕ ಜಯಂತಿ ಆಚರಣೆಗೆ ಸಹಕಾರ ನೀಡಲಾಗಿದೆ.********************************

Leave a Reply

Your email address will not be published. Required fields are marked *

Back to top button