ಪ್ರಕೃತಿ ಬೆಳಗಾವಿ
*ಮಟಕಾ ಅಡ್ಡೆ ಮೇಲೆ ದಾಳಿ: ಓರ್ವನ ಬಂಧನ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ನಗರದ ಅನಗೋಳದ ಡಿವಿಎಸ್ ವೃತ್ತದ ಬಳಿ ಅಕ್ರಮವಾಗಿ ಮಟಕಾ ಜೂಜಾಟ ನಡೆಸುತ್ತಿದ್ದ ಕುತುಬುದ್ದೀನ್ ಹುದಲಿ (56) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ನ.3ರಂದು ಇನ್ಸ್‌ಪೆಕ್ಟರ್ ಪರಶುರಾಮ ಪೂಜಾರಿ ನೇತೃತ್ವದಲ್ಲಿ ದಾಳಿ ನಡೆಸಿ, ಆರೋಪಿಯಿಂದ 680 ರು. ನಗದು ಹಾಗೂ ಓಸಿ ಚೀಟಿಗಳನ್ನು ಜಪ್ತಿ ಮಾಡಲಾಗಿದೆ. ಈ ಕುರಿತು ತಿಲಕವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.*******************************






