ಪ್ರಕೃತಿ ಬೆಳಗಾವಿ

*ಅಷ್ಟೇ. ಬುಡ್ರ್ಯಾನೂರ ಗ್ರಾಮದಲ್ಲಿ ₹18 ಕೋಟಿ ವೆಚ್ಚದ ಮುರಾರ್ಜಿ ವಸತಿ ಶಾಲೆ ಕಟ್ಟಡಕ್ಕೆ ಅಡಿಗಲ್ಲು ಪೂಜೆ*

*ಸಚಿವ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಅಷ್ಟೇ. ಬುಡ್ರ್ಯಾನೂರ ಗ್ರಾಮದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಾಣಗೊಳ್ಳಲಿರುವ ನೂತನ ಮುರಾರ್ಜಿ ವಸತಿ ಶಾಲೆಯ ಕಟ್ಟಡಕ್ಕೆ ಅಡಿಗಲ್ಲು ಪೂಜಾ ಕಾರ್ಯಕ್ರಮ ನೆರವೇರಿತು.

ಸಚಿವ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 18 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ವಸತಿ ಶಾಲೆಯ ಕಟ್ಟಡ ಕಾಮಗಾರಿಗೆ ಚಾಲನೆ ನೀಡಲಾಯಿತು.

ಈ ವಸತಿ ಶಾಲೆಯ ನಿರ್ಮಾಣದಿಂದ ಗ್ರಾಮೀಣ ಭಾಗದ ಹಾಗೂ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ವಸತಿ ಸೇರಿದಂತೆ ಅಗತ್ಯ ಮೂಲಸೌಕರ್ಯಗಳು ದೊರೆಯಲಿವೆ.

ಶಿಕ್ಷಣದ ಮೂಲಕ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ಈ ಮಹತ್ವದ ಯೋಜನೆಯು ಯಮಕನಮರಡಿ ಮತಕ್ಷೇತ್ರದ ಶೈಕ್ಷಣಿಕ ಅಭಿವೃದ್ಧಿಗೆ ಮತ್ತಷ್ಟು ಬಲ ನೀಡಲಿದೆ.

ಸಚಿವ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಶಿಕ್ಷಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ.*******************************

Leave a Reply

Your email address will not be published. Required fields are marked *

Back to top button